ಸಾರಾಂಶ
ಕೋಟಿಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು.
ಗುಳೇದಗುಡ್ಡ: ತಾಲೂಕಿನ ಕೋಟಿಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು. ಎಲ್ಲಾ ವಿದ್ಯಾರ್ಥಿಗಳಿಗೆ ಹೂ ಮತ್ತು ಸಿಹಿ ನೀಡಿ ಶಿಕ್ಷಕರು ಆತ್ಮೀಯವಾಗಿ ಬರಮಾಡಿಕೊಂಡು, ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ನಂತರ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಶಾಲೆಬಿಟ್ಟ ಮಕ್ಕಳು ಶಾಲೆಗೆ ಬನ್ನಿ ಮತ್ತು ಅನಕ್ಷರತೆ ಮುಕ್ತವಾಗಲಿ ಎಂಬ ಘೋಷಣೆಗಳನ್ನು ಕೂಗುತ್ತ ಸಂಚರಿಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಿ ಮೇಟಿ ಚಾಲನೆ ನೀಡಿದರು. ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಹನುಮಂತ ಮಾವಿನ ಮರದ, ನಿವೃತ್ತಿ ಬ್ರಿಗೇಡಿಯರ್ ಕಡಪಟ್ಟಿ, ಎಸ್ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಿಕೆಪಿಎಸ್ ಸದಸ್ಯರು ಗ್ರಾಮದ ಪ್ರಮುಖ ಹಿರಿಯರು ಪಾಲ್ಗೊಂಡಿದ್ದರು.