ಮಲಪ್ರಭೆಯ ರಾಯಣ್ಣ ಸೇತುವೆ ಬಳಿ ಪ್ರತಿಮೆ ನಿರ್ಮಾಣಕ್ಕೆ ಮನವಿ

| Published : May 27 2024, 01:10 AM IST

ಮಲಪ್ರಭೆಯ ರಾಯಣ್ಣ ಸೇತುವೆ ಬಳಿ ಪ್ರತಿಮೆ ನಿರ್ಮಾಣಕ್ಕೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಹತ್ತಿರ ಮಲಪ್ರಭಾ ನದಿಗೆ ನಿರ್ಮಾಣವಾಗುತ್ತಿರುವ ರಾಯಣ್ಣ ಸೇತುವೆ ಪಕ್ಕದಲ್ಲಿ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮಿಜಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಎಚ್.ಎಂ.ರೇವಣ್ಣ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಶೌರ್ಯ-ಸಾಹಸ ಮೆಚ್ಚುವಂತದ್ದು. ಶ್ರೀಗಳ ಹಾಗೂ ನಾಡಿನ ಜನರ ಬೇಡಿಕೆಯಂತೆ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಪ್ರತಿಮೆ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ದೇಶಕ ನಾಗಣ್ಣ, ಮುಖಂಡರಾದ ರುದ್ರಪ್ಪ ಬೇವಿನಗಿಡದ, ಮಹಾಂತೇಶ ಅಂಗಡಿ, ಮಲ್ಲಿಕಾರ್ಜುನ ಪೂಜೇರ, ಉಮೇಶ ಪೂಜೇರ ಇದ್ದರು.