ಕಾಸರಗೋಡು ಕನ್ನಡ ಶಾಲೆ ದುಸ್ಥಿತಿ ಬಗ್ಗೆ ಕಸಾಪದಿಂದ ಮುಖ್ಯಮಂತ್ರಿಗಳಿಗೆ ಮನವಿ

| Published : Dec 08 2024, 01:18 AM IST

ಕಾಸರಗೋಡು ಕನ್ನಡ ಶಾಲೆ ದುಸ್ಥಿತಿ ಬಗ್ಗೆ ಕಸಾಪದಿಂದ ಮುಖ್ಯಮಂತ್ರಿಗಳಿಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೇರಳದ ಗಡಿನಾಡು ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಕಾಸರಗೋಡು ಕನ್ನಡ ಶಾಲೆಯ ದುಸ್ಥಿತಿ ಮತ್ತು ಪಠ್ಯೇತರ ವಿಷಯಗಳಲ್ಲಿ ಕನ್ನಡದ ಅವಗಣನೆ ಮಾಡಿರುವ ಕೇರಳದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೇರಳದ ಗಡಿನಾಡು ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಶನಿವಾರ ಕಾಸರಗೋಡು ಕನ್ನಡ ಶಾಲೆಯ ದುಸ್ಥಿತಿ ಮತ್ತು ಪಠ್ಯೇತರ ವಿಷಯಗಳಲ್ಲಿ ಕನ್ನಡದ ಅವಗಣನೆ ಮಾಡಿರುವ ಕೇರಳದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೇರಳದ ಗಡಿನಾಡು ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ್, ಕರ್ನಾಟಕ ಗಮಕಲಾ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ಕೋಶಾಧಿಕಾರಿ ಮನೋಹರ್ ಭಟ್ ಪಿ., ಕಸಾಪ ತಾಲೂಕು ಅಧ್ಯಕ್ಷರಾದ ಪುಂಡಲೀಕ ಮರಾಠೆ, ರಾಮಚಂದ್ರ ಐತಾಳ್, ನರಸಿಂಹ ಮೂರ್ತಿ ರಾವ್ ಹೋಬಳಿ ಮತ್ತು ಗ್ರಾಮ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.