ವಿವಿಧ ಬೇಡಿಕೆ ಈಡೇರಿಸುವಂತೆ ಶಿಕ್ಷಕರ ಸಂಘದಿಂದ ಮನವಿ

| Published : Dec 16 2024, 12:45 AM IST

ಸಾರಾಂಶ

ತಿಪಟೂರು: ಜಿಲ್ಲಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿಗಳು ಪ್ರಾರಂಭವಾಗಿದ್ದು, ಈ ಅವಧಿಯನ್ನು ಬೆಳಗ್ಗೆ ೧೦ಗಂಟೆಯಿಂದ ಸಂಜೆ ೫ಗಂಟೆಯವರೆಗೆ ನಿಗದಿಪಡಿಸಬೇಕು ಹಾಗೂ ಶಿಕ್ಷಕರಿಗೆ ವ್ಯವಸ್ಥಿತವಾಗಿ ಮಧ್ಯಾಹ್ನದ ಊಟದ ಇನ್ನಿತರ ವ್ಯವಸ್ಥೆ ಕಲ್ಪಿಸಿಕೊಡುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪ್ರಭುಗೆ ಮನವಿ ಸಲ್ಲಿಸಲಾಯಿತು.

ಸಂಘದ ತಾಲೂಕು ಅಧ್ಯಕ್ಷ ಜಿ.ಆರ್. ಜಯರಾಂ ಮಾತನಾಡಿ, ಡಯಟ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ತರಬೇತಿಗಳಿಗೆ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲೂಕುಗಳಿಂದ ಸುಮಾರು ೮೦ ಕಿಮೀ ಗಳನ್ನು ಪ್ರಯಾಣ ಮಾಡಿ ಶಿಕ್ಷಕರು ಬರುತ್ತಾರೆ. ಅವರು ನಿಗದಿತ ಸಮಯಕ್ಕೆ ತರಬೇತಿಗೆ ಹಾಜರಾಗಲು ಕಷ್ಟಕರವಾಗಿರುವುದರಿಂದ ಈ ಮೂರು ತಾಲೂಕುಗಳ ಶಿಕ್ಷಕರಿಗೆ ಅನುಕೂಲವಾಗುವಂತೆ ಹತ್ತಿರದಲ್ಲಿ ತರಬೇತಿ ಕೇಂದ್ರ ಸ್ಥಾನ ನಿಗದಿಪಡಿಸಬೇಕು. ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಪೂರೈಸುವ ವಿತರಣೆಯಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ಶಿಕ್ಷಕರಿಗೆ ಬೋಧನೇತರ ಕಾರ್ಯಗಳ ಒತ್ತಡವನ್ನು ಕಡಿಮೆ ಮಾಡಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಜಿಲ್ಲಾಧ್ಯಕ್ಷ ಪರಶಿವಮೂರ್ತಿ ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ತಾಲೂಕು ಪ್ರಧಾನ ಕಾರ್ಯದರ್ಶಿ ಪಟ್ಟಾಭಿರಾಮು ಮತ್ತಿತರರಿದ್ದರು.