ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ 59ನೇ ಪಟ್ಟಾಭಿಷೇಕದ ವರ್ಧಂತಿಯ ಪ್ರಯುಕ್ತ ಪುತ್ತೂರಿನ ದರ್ಬೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ ಅವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಖಾವಂದರಿಗೆ ಗೌರವಾಭಿನಂದನೆ ಸಲ್ಲಿಸಿದರು.
ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ 59ನೇ ಪಟ್ಟಾಭಿಷೇಕದ ವರ್ಧಂತಿಯ ಪ್ರಯುಕ್ತ ಪುತ್ತೂರಿನ ದರ್ಬೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ ಅವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಖಾವಂದರಿಗೆ ಗೌರವಾಭಿನಂದನೆ ಸಲ್ಲಿಸಿದರು. ರಜತಮಹೋತ್ಸವನ್ನು ಆಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು ಹಾಗೂ ವಿದ್ಯಾರಶ್ಮಿ ವಿದ್ಯಾಲಯದ ರಜತಮಹೋತ್ಸವದ ಸ್ಮರಣ ಸಂಚಿಕೆಗೆ ಶುಭಾಶಯ ಪತ್ರವನ್ನು ನೀಡುವಂತೆ ಮನವಿ ಮಾಡಲಾಯಿತು. ಸಂಘದ ನಿರ್ದೇಶಕ ರಾಮಯ್ಯ ರೈ ಎನ್., ರಶ್ಮಿ ರೈ ಎಸ್. ಮಹಾ ಪ್ರಬಂಧಕ ವಸಂತ ಜಾಲಾಡಿ, ಸಹಾಯಕ ಮಹಾ ಪ್ರಬಂಧಕ ಸುನಾದ್ ರಾಜ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ರಾಜಲಕ್ಷ್ಮಿ ಎಸ್ ರೈ, ಸಂಘದ ಉಜಿರೆ ಶಾಖೆಯ ಶಾಖಾ ವ್ಯವಸ್ಥಾಪಕಿ ವಾಣಿಶ್ರೀ ಬಿ ಎಲ್ ಮತ್ತಿತರರು ಉಪಸ್ಥಿತರಿದ್ದರು.