ದೈಹಿಕ ಶಿಕ್ಷಕರಿಲ್ಲದ ಶಾಲೆ ಮಕ್ಕಳ ಕ್ರೀಡಾ ಸಾಧನೆಗೆ ಪ್ರಶಂಸೆ

| Published : Sep 14 2024, 01:54 AM IST

ಸಾರಾಂಶ

ಕೊಪ್ಪ, ತಾಲೂಕಿನ ಬಸರಿಕಟ್ಟೆಯ ಸದ್ಗುರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಯಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಿಲ್ಲದ ಲೋಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಒಟ್ಟು೧೦ ಬಹುಮಾನ ಪಡೆದು, ಎಂಟು ಕ್ರೀಡೆಗಳಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಪ್ರಶಂಸೆಗೆ ಪಾತ್ರವಾಗಿದೆ.

ಲೋಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಕನ್ನಡಪ್ರಭ ವಾರ್ತೆ, ಕೊಪ್ಪ

ತಾಲೂಕಿನ ಬಸರಿಕಟ್ಟೆಯ ಸದ್ಗುರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಯಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಿಲ್ಲದ ಲೋಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಒಟ್ಟು೧೦ ಬಹುಮಾನ ಪಡೆದು, ಎಂಟು ಕ್ರೀಡೆಗಳಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಪ್ರಶಂಸೆಗೆ ಪಾತ್ರವಾಗಿದೆ.ಹೆಣ್ಣು ಮಕ್ಕಳ ಕಬ್ಬಡಿಯಲ್ಲಿ ಪ್ರಥಮ ಸ್ಥಾನ, ವಿದ್ಯಾರ್ಥಿನಿ ಪೂಜಾ ೧೦೦ ಮೀಟರ್ ಓಟ, ಗುಂಡು ಎಸೆತ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾಳೆ. ಇಬ್ಬನಿ ೨೦೦ ಮೀಟರ್ ಓಟ ಪ್ರಥಮ, ಗುಂಡು ಎಸೆತ, ತಟ್ಟೆ ಎಸೆತದಲ್ಲಿ ತೃತೀಯ ಸ್ಥಾನ ಹಾಗೂ ಹೆಣ್ಣು ಮಕ್ಕಳ ರಿಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಅಫ್ಜಲ್ ಗುಂಡು ಎಸೆತ, ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಒಟ್ಟು ೧೦ ಬಹುಮಾನ ಪಡೆದು, ಎಂಟು ಕ್ರೀಡೆಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದೈಹಿಕ ಶಿಕ್ಷಕರಿಲ್ಲದ ಈ ಶಾಲೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಸತೀಶ್ ಹಾಗೂ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ರಮೇಶ್‌ ಮಕ್ಕಳಿಗೆ ಸಿಹಿ ಹಂಚಿ ಮೆಚ್ಚುಗೆ ವ್ಯಕ್ತಪಡಿಸಿ ಮಕ್ಕಳ ಸಾಧನೆಗೆ ಅವಕಾಶ ಕಲ್ಪಿಸಿದ ಮುಖ್ಯ ಶಿಕ್ಷಕ ಲಕ್ಷ್ಮಣ್ ಹಾಗೂ ಸಹಶಿಕ್ಷರನ್ನು ಅಭಿನಂದಿಸಿದ್ದಾರೆ.