ಬಾಗಲಕೋಟೆ ಜಿಲ್ಲೆಯ ಪ್ರವಾಸಕ್ಕಾಗಿ ಆಗಮಿಸಿದ್ದ ವಿದೇಶಿ ಪ್ರವಾಸಿಗರೊಬ್ಬರಿಗೆ ಪಾರ್ಶ್ವವಾಯು ಹೊಡೆದು ಅಸ್ವಸ್ಥಗೊಂಡ ಹಿನ್ನೆಲೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ, ಅಧಿಕಾರಿಗಳು ತ್ವರಿತವಾಗಿ ಬಾದಾಮಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ಒದಗಿಸಿ, ಮಾನವೀಯತೆ ಮೆರೆದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯ ಪ್ರವಾಸಕ್ಕಾಗಿ ಆಗಮಿಸಿದ್ದ ವಿದೇಶಿ ಪ್ರವಾಸಿಗರೊಬ್ಬರಿಗೆ ಪಾರ್ಶ್ವವಾಯು ಹೊಡೆದು ಅಸ್ವಸ್ಥಗೊಂಡ ಹಿನ್ನೆಲೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ, ಅಧಿಕಾರಿಗಳು ತ್ವರಿತವಾಗಿ ಬಾದಾಮಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ಒದಗಿಸಿ, ಮಾನವೀಯತೆ ಮೆರೆದರು.ಬಾದಾಮಿಗೆ ಆಗಮಿಸಿದ್ದ ಫ್ರೆಂಚ್ ದೇಶದ ಇಝಾಕ್ ಗೋಲ್ಡ್‌ಬರ್ಗ್ ಎಂಬ ಪ್ರವಾಸಿಗನಿಗೆ ಪಾರ್ಶ್ವವಾಯು ಹೊಡೆದು ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರ ತಂಡ ಇಝಾಕ್‌ರ ಆರೋಗ್ಯ ಪರಿಶೀಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಈ ವಿಷಯ ತಿಳಿದ ಜಿಲ್ಲಾಡಳಿತ ಸೂಕ್ತ ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಿ ಸಿಟಿ ಸ್ಕ್ಯಾನ್, ಎಂ.ಆರ್.ಐ ಸ್ಕ್ಯಾನ್ ಮಾಡಿಸಿ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿದೆ.
ಸದ್ಯ ವಿದೇಶಿ ಪ್ರವಾಸಿಗ ಇಝಾಕ್ ಗೋಲ್ಡ್‌ಬರ್ಗ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಡಿ.ಎನ್ ತಿಳಿಸಿದ್ದಾರೆ. ಪ್ರವಾಸಿಗನನ್ನು 24 ಗಂಟೆಗಳ ಕಾಲ ವೀಕ್ಷಣೆಯಲ್ಲಿ ಇಡಲಾಗಿದೆ. ಪ್ರವಾಸಿಗನ ಬಗ್ಗೆ ಬೆಂಗಳೂರಿನ ವಿದೇಶಿ ರಾಯಬಾರಿ ಕಚೇರಿಗೆ ಮಾಹಿತಿ ನೀಡಿರುವುದಾಗಿ ಅವರು ಹೇಳಿದರು.