ಕ್ಷೇತ್ರದ ಜನರ ಋಣ ತೀರಿಸಲು ಪ್ರಾಮಾಣಿಕ ಯತ್ನ

| Published : Jun 06 2024, 12:31 AM IST

ಕ್ಷೇತ್ರದ ಜನರ ಋಣ ತೀರಿಸಲು ಪ್ರಾಮಾಣಿಕ ಯತ್ನ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರದಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅಧಿಕಾರ ಸ್ವೀಕರಿಸಿದ ಬಳಿಕೆ ಕೋಲಾರ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಅನುದಾನ ತಂದು ಅಭಿವೃದ್ದಿ ಪಡಿಸಲಾಗುವುದು

ಕನ್ನಡಪ್ರಭ ವಾರ್ತೆ ಕೋಲಾರಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಕಾಂಗ್ರೆಸ್ ವಿರುದ್ದ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ನೂತನ ಸಂಸದರಿಗೆ ಅಭಿಮಾನಿಗಳು ಸನ್ಮಾನಿಸಿದರು.ತಾಲೂಕಿನ ಕುಂಬಾರಹಳ್ಳಿ ಮಲ್ಲೇಶ್‌ಬಾಬು ಸ್ವಗೃಹದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಲ್ಲೇಶ್‌ಬಾಬುರಿಗೆ ಸಿಹಿ ತಿನ್ನಿಸಿ ಸನ್ಮಾಸಿಸಿದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ನೂತನ ಸಂಸದ ಎಂ. ಮಲ್ಲೇಶ್ ಬಾಬು ಕೋಲಾರ ಲೋಕಸಭಾ ಕ್ಷೇತ್ರದ ಮತದಾರ ಬಂದು ಆಶೀರ್ವದಿಸಿ ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ, ೫ ವರ್ಷಗಳ ಕಾಲ ಕ್ಷೇತ್ರದ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.ಕೇಂದ್ರದಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅಧಿಕಾರ ಸ್ವೀಕರಿಸಿದ ಬಳಿಕೆ ಕೋಲಾರ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಅನುದಾನ ತಂದು ಅಭಿವೃದ್ದಿ ಪಡಿಸಲಾಗುವುದಲ್ಲದೆ, ಶ್ರೀನಿವಾಸಪುರದಲ್ಲಿ ಮಾವು ಸಂಸ್ಕರಣಾ ಘಟಕ, ಕೋಲಾರದಲ್ಲಿ ಟೊಮೆಟೋ ಸಂಸ್ಕರ ಘಟಕ ಸ್ಪಾಪಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇನೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ನನ್ನ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು ಮುಖಂಡರು ವಿಶೇಷವಾಗಿ ಮಾಜಿ ಸಂಸದ ಎಸ್.ಮುನಿಸ್ವಾಮಿ, ಎಂಎಲ್ಸಿ ಇಂಚರ ಗೋವಿಂದರಾಜು, ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್, ಜಿ.ಕೆ.ವೆಂಕಟಶಿವಾರೆಡ್ಡಿ, ಜೆಡಿಎಸ್ ಮುಖಂಡರಾದ ಸಿಎಂಆರ್ ಶ್ರೀನಾಥ್, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಲೂರು ಹೂಡಿ ವಿಜಯ್ ಕುಮಾರ್, ಮಾಜಿ ಶಾಸಕ ಮಂಜುನಾಥ್ ಗೌಡ, ಜೆಡಿಎಸ್ ಮುಖಂಡ ರಾಮೇಗೌಡ, ಬಂಗಾರಪೇಟೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಚಂದ್ರಾರೆಡ್ಡಿ, ಕೆಜಿಎಪ್ ಮಾಜಿ ಶಾಸಕ ವೈ.ಸಂಪಂಗಿ, ಶಿಡ್ಲಘಟ್ಟ ಶಾಸಕ ರವಿ, ಚಿಂತಾಮಣಿ ಮಾಜಿ ಶಾಸಕ ಜೆ.ಕೆ.ಕೃಷ್ಣಾ ರೆಡ್ಡಿ ಸೇರಿದಂತೆ ಅನೇಕರಿಗೆ ಅಭಿನಂದನೆ ಸಲ್ಲಿಸಿದರು.

ಜೆಡಿಎಸ್ ಮುಖಂಡರಾದ ವಿಸ್ವನಾಥ್‌, ವಡಗೂರು ರಾಮ, ಗಿರೀಶ್, ನಗರಸಭೆ ಸದಸ್ಯ ರಾಕೇಶ್ ಇದ್ದರು.