ಗ್ರಾಮಗಳ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ

| Published : Mar 19 2024, 12:50 AM IST

ಗ್ರಾಮಗಳ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಬಾಗ: ದೇಶವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಉತ್ತಮವಾದ ಆಡಳಿತದ ಅವಶ್ಯಕತೆಯಿರುವುದರಿಂದ ಮತ್ತೆ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಸಂಸದ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ದೇಶವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಉತ್ತಮವಾದ ಆಡಳಿತದ ಅವಶ್ಯಕತೆಯಿರುವುದರಿಂದ ಮತ್ತೆ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಸಂಸದ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಪಟ್ಟಣದ ಆದರ್ಶ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲೆಯ ರಾಯಬಾಗ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ 8 ವಿಧಾನಸಭಾಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದರು.

ತಾಲೂಕಿನ ವಿವಿಧ ಗ್ರಾಮಗಳ ದೇವಸ್ಥಾನದ ಹತ್ತಿರ ಸಂಸ್ಕೃತಿ ಭವನಗಳ ನಿರ್ಮಾಣದ ಆದೇಶದ ಪ್ರತಿಗಳನ್ನು ವಿತರಿಸಿ ಅನುದಾನವನ್ನು ಜಿಪಂಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು.

ಶಾಸಕ ಡಿ.ಎಂ.ಐಹೊಳೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚುನಾವಣೆಯನ್ನುಗಮನದಲ್ಲಿಟ್ಟುಕೊಂಡು ಬೂತಮಟ್ಟದಲ್ಲಿ ಕಾರ್ಯಕರ್ತರು ತಮಗೆ ವಹಿಸಿಕೊಟ್ಟ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಪ್ರಾಮಾಣಿಕವಾಗಿ ನಿರ್ವಹಿಸಿದಲ್ಲಿ ಮತ್ತೊಮ್ಮೆ ಮೋದಿಜಿಯವರನ್ನು ಪ್ರಧಾನ ಮಂತ್ರಿ ಮಾಡಲು ಚಿಕ್ಕೋಡಿ ಲೋಕಸಭಾಕ್ಷೇತ್ರದಿಂದ ಅಣ್ಣಾಸಾಹೇಬ್‌ ಜೊಲ್ಲೆಯವರನ್ನು ಬೆಂಬಲಿಸಿ ಅಭೂತಪೂರ್ವ ಗೆಲುವು ಸಾಧಿಸಲು ಎಲ್ಲರೂ ಒಗ್ಗೂಡಿ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಉಪಾಧ್ಯಕ್ಷ ರಾಜಶೇಖರ ಖಣದಾಳೆ, ಮಹೇಶ ಭಾತೆ, ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸಂಜು ಪಾಟೀಲ, ಸದಾಶಿವ ಘೋರ್ಪಡೆ, ನ್ಯಾಯವಾದಿ ಎಲ್.ಬಿ ಚೌಗಲಾ, ದುಂಡಪ್ಪ ಭೆಂಡವಾಡೆ, ಅಣ್ಣಾಸಾಬ್ ಖೆಮಲಾಪೂರೆ, ಸದಾನಂದ ಹಳಿಂಗಳಿ, ಅಪ್ಪಾಸಾಬ ಬ್ಯಾಕೂಡೆ, ವಿ.ಎಸ್.ಪೂಜೇರಿ, ಅಂಕುಶ ಜಾಧವ, ಪಿ.ಎಂ.ದರೂರ, ಸಂಗಣ್ಣ ದತ್ತವಾಡೆ, ಬಸವರಾಜ ಡೊಣವಾಡೆ, ಭಾರತಿ ಲೋಹಾರ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.