ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ಒಂಟಿ ಸಲಗ ಪುಂಡಾಟ ಶುರು

| Published : Jan 03 2025, 12:33 AM IST

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡು ಜನರನ್ನು ಆತಂಕಕ್ಕೀಡು ಮಾಡಿದೆ.

ಚನ್ನಪಟ್ಟಣ: ತಾಲೂಕಿನ ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡು ಜನರನ್ನು ಆತಂಕಕ್ಕೀಡು ಮಾಡಿದೆ. ಕೆರೆಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ ನೀರಿನಲ್ಲಿ ಘೀಳಿಡುತ್ತಾ, ನೀರಿನಿಂದ ಹೊರಬಂದು ಅಕ್ಕಪಕ್ಕದ ಪ್ರದೇಶದಲ್ಲಿ ಓಡಾಡುತ್ತಿದೆ. ಕೆರೆಯ ಅಕ್ಕಪಕ್ಕದ ಪ್ರದೇಶದಲ್ಲಿ ಬಿದ್ದಿದ್ದ ಮರದ ತುಂಡುಗಳ ಮೇಲೆ ಪುಂಡಾಟ ಆರಂಭಿಸಿದೆ. ಇದೇ ವೇಳೆ ಕೆರೆ ಅಕ್ಕಪಕ್ಕದ ಜಮೀನುಗಳ ಮೇಲೆ ದಾಂಗಡಿ ಇಟ್ಟು ಬೆಳೆ ನಾಶ ಮಾಡಿದೆ. ಒಂಟಿ ಸಲಗ ಪುಂಡಾಟವನ್ನು ಸ್ಥಳೀಯೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಜಮೀನುಗಳಿಗೆ ತೆರಳಲು ಗ್ರಾಮಸ್ಥರು ಹಿಂಜರಿಯುತ್ತಿದ್ದಾರೆ. ಎರಡು ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಿದ ಬೆನ್ನಲ್ಲೇ ಮದವೇರಿದ ಒಂಟಿ ಸಲಗ ಕಾಣಿಸಿಕೊಂಡಿರುವುದು ಗ್ರಾಮಸ್ಥರನ್ನು ಆತಂಕಗೊಳಿಸಿದೆ. ಕಾಡಾನೆ ಉಪಟಳಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.