ಸಾರಾಂಶ
ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಧಾರ ಹಿಂಪಡೆದಿರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟ ಭರವಸೆ ನೀಡದ್ದನ್ನು ಖಂಡಿಸಿ ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಸಾಕು ನಾಯಿಗಳ ಸಮೇತ ಕೇಂದ್ರ ಗ್ರಂಥಾಲಯದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಧಾರ ಹಿಂಪಡೆದಿರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟ ಭರವಸೆ ನೀಡದ್ದನ್ನು ಖಂಡಿಸಿ ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಸಾಕು ನಾಯಿಗಳ ಸಮೇತ ಕೇಂದ್ರ ಗ್ರಂಥಾಲಯದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.ಕಬ್ಬನ್ ಪಾರ್ಕ್ ನಲ್ಲಿ ಚುನಾವಣಾ ಆಯೋಗಕ್ಕೆ ಹೊಸ ಕಟ್ಟಡವೊಂದನ್ನು ನಿರ್ಮಿಸಿ ಕೊಡಲು ಹಾಗೂ ಕೆಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಲು ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣ ಯೋಜನೆಗೆ ರಾಜ್ಯ ಮುಂದಾಗಿತ್ತು. ಸಾಕಷ್ಟು ವಿರೋಧದ ಬಳಿಕ ಇದನ್ನು ಹಿಂಪಡೆಯುವ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದ್ದರೂ ಮುಖ್ಯಮಂತ್ರಿ, ಸಚಿವರು ಈ ಕುರಿತು ಸ್ಪಷ್ಟ ಹೇಳಿಕೆ ನೀಡಿಲ್ಲ. ಸರ್ಕಾರ ಭರವಸೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಸಂಘದ ಅಧ್ಯಕ್ಷ ಎಸ್. ಉಮೇಶ್ ಹೇಳಿದರು.
ಅರುಣ್‌ಕುಮಾರ್, ಅಲೆಕ್ಸಾಂಡರ್, ರಕ್ಷಾ, ತ್ರಿಷಾಲ್ ಸಿಂಗ್, ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.