ಸಾರಾಂಶ
ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ನೂರಾರು ಮಂದಿ ಭಕ್ತರು ಭಾಗಿಯಾಗಿದ್ದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಅಯ್ಯಪ್ಪ ಸ್ವಾಮಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಹಾಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು. ನೂರಾರು ಸಂಖ್ಯೆಯಲ್ಲಿ ಅಯ್ಯಪ್ಪಸ್ವಾಮಿ ವ್ರತಧಾರಿಗಳು, ಸಾರ್ವಜನಿರು ಪಾಲ್ಗೊಂಡಿದ್ದರು. ಅನ್ನದಾನ ಏರ್ಪಡಿಸಲಾಗಿತ್ತು.ಮಂಡಲ ಪೂಜೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಹಾಗೂ ವಿದ್ಯುತ್ ದೀಪಾಗಳಿಂದ ಅಲಂಕರಿಸಲಾಗಿತ್ತು. ಬುಧವಾರ ಬೆಳಗ್ಗೆ 6.45ಕ್ಕೆ ಗಣಪತಿ ಹೋಮ, 7.10ಕ್ಕೆ ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, 7.30ಕ್ಕೆ ಚಂಡೆಮೇಳ, 9 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ ನೆರವೇರಿತು. 11.30 ಗಂಟೆಗೆ ಅಯ್ಯಪ್ಪ ಸ್ವಾಮಿಗೆ ಲಕ್ಷಾರ್ಚನೆ ಪೂಜೆ, 12.30ಕ್ಕೆ ಪಲ್ಲಪೂಜೆ ಬಿಲ್ವಪತ್ರೆ ಅರ್ಚನೆ, ತುಳಸಿಅರ್ಚನೆ, ಪಂಚಾಮೃತ ಅಭಿಷೇಕ, ದೂರ್ವಾರ್ಚನೆ ನಡೆಯಿತು. ದೇವಸ್ಥಾನದ ಅರ್ಚಕರಾದ ಗಣೇಶ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಭಲೇಶ್ವರ ಭಟ್, ಮನೋಜ್ ಭಟ್ ಪೂಜಾ ಕೈಂಕರ್ಯಗಳನ್ನು ನೇರವೇರಿಸಿದರು.
ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ ಬಿ.ಎಂ. ಸುರೇಶ್ (ಪುಟ್ಟ) ಉಪಾಧ್ಯಕ್ಷರಾದ ಬಿ.ಎ.ಪುನೀತ್, ಪ್ರಶಾಂತ್ ಕುಮಾರ್,(ಕೋಕ) ಎಂ. ಮಂಜುನಾಥ್, ಕೆ. ರವಿ, ಪ್ರಧಾನ ಕಾರ್ಯದರ್ಶಿ ಎಂ. ಚಂದ್ರ, ಖಜಾಂಜಿ ಎಂ.ಆರ್. ಶಶಿಕುಮಾರ್, ಗೌರವಾಧ್ಯಕ್ಷರಾದ ಕೆ.ಎ. ಬಾಲಕೃಷ್ಣ, ಮುತ್ತಯ್ಯ, ಸುರೇಶ್ ಗೋಪಿ, ಕಾರ್ಯದರ್ಶಿಗಳಾದ ವಿ.ಕೆ. ರಾಜು, ಮಣಿಕಂಠ, ಸಂಘಟನಾ ಕಾರ್ಯದರ್ಶಿಗಳಾದ ಪೃಥ್ವಿರಾಜ್, ಡಿ.ಕೆ. ರಾಕೇಶ್, ಶೇಖರ(ಅಣ್ಣು), ಎಂ. ಉದಯ, ಕೆ.ಕೆ. ವಾಸು, ಸಿ.ಸಿ. ಸುನೀಲ್, ಧನು ಕಾವೇರಪ್ಪ, ಸಲಹಾ ಸಮಿತಿ, ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.