ಕನ್ನಡಪ್ರಭ ವಾರ್ತೆ ಯಮಕನಮರಡಿ ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಪ್ರಕಾಶ ಅ.ಹೊಸಮನಿ ಘೋಷಣೆ ಮಾಡಿದರು.
ಕನ್ನಡಪ್ರಭ ವಾರ್ತೆ ಯಮಕನಮರಡಿ
ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಪ್ರಕಾಶ ಅ.ಹೊಸಮನಿ ಘೋಷಣೆ ಮಾಡಿದರು.ಹಿಡಕಲ್ ಡ್ಯಾಮ್‌ನ ಶಿವಾಲಯ ಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಮತ್ತು ಗಾಯಕಿ ಎಸ್.ಜಾನಕಿ ನುಡಿ ನಮನ ಕಾರ್ಯಕ್ರಮದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಹುಕ್ಕೇರಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕ ಹುಕ್ಕೇರಿ, ಡಾ.ಬಿ.ಆರ್.ಅಂಬೇಡ್ಕರ್ ಎಸ್ಸಿ/ಎಸ್ಟಿ ಸಮಾಜ ಸೇವಾ ಸಂಘ ಬೆಳಗಾವಿ, ಮಾನಸ ಅರ್ಬನ್ ಆ್ಯಂಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಹಿಡಕಲ್ ಡ್ಯಾಮ್, ಭಾರತೀಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ನಾದ ಬಿಂದು ಸಂಗೀತ ಅಕಾಡೆಮಿ ಹಿಡಕಲ್ ಡ್ಯಾಮ್ ಹಾಗೂ ಹವ್ಯಾಸಿ ಕಲಾ ತಂಡ ಹುಕ್ಕೇರಿ ಸಂಯುಕ್ತಾಶ್ರಯದಲ್ಲಿ ಜರುಗಿದ ತತ್ವಪದ, ಮೂಲ ಜಾನಪದ ಗೀತೆ, ರಾಷ್ಟ್ರ ಭಕ್ತಿ ಗೀತೆ, ಭಾವಗೀತೆ ಹಾಗೂ ವಿವಿಧ ಕರೋಕೆ ಗಾಯಕರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಕ್ಕಳ ಸಾಹಿತಿ ಎಸ್.ಎಂ.ಶಿರೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾಡಿಗೆ ತಮ್ಮ ತ್ಯಾಗ ಬಲಿದಾನಗಳ ಮೂಲಕ ಹಲವಾರು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ ಎಂದರು. ಕನ್ನಡ ಸಾಹಿತ್ಯ ಪರಿಷತ್‌ನ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ ಅವಲಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಡಕಲ್ ಡ್ಯಾಮ್ ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ವೇಧಿಕೆಯನ್ನು ಕಲ್ಪಿಸುತ್ತಿದ್ದೇವೆ ಎಂದು ಹೇಳಿದರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹುಕ್ಕೇರಿಯ ಖ್ಯಾತ ಗಾಯಕರು ಹಾಗೂ ಪಬ್ಲಿಕ್ ನೆಟ್ವರ್ಕ್ ವಾಹಿನಿಯ ಮುಖ್ಯಸ್ಥರು ಆದ ಪ್ರಶಾಂತ್ ನಾಗನೂರಿ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು ಈ ಭಾಗದಲ್ಲಿ ವಿಶಿಷ್ಟ, ವಿನೂತನ, ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪ್ರಕಾಶ ಹೊಸಮನಿ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾದುದು ಎಂದು ಹೇಳಿದರು. ಸುಕ್ಷೇತ್ರ ಇಂಗಳಗಿಯ ಶಕ್ತಿಪೀಠ ಬ್ರಹ್ಮ ಲಿಂಗೇಶ್ವರ ಮಹಾಸ್ವಾಮಿಗಳು ಹಾಗೂ ಅಂಕಲಗುಡೀಕ್ಷೇತ್ರದ ಸಿದ್ದಯ್ಯ ಸ್ವಾಮಿಗಳು ಸಾನ್ನಿಧ್ಯವಹಿಸಿದ್ದರು.ಗಾನ ಸಿಂಚನ ಕಾರ್ಯಕ್ರಮದಲ್ಲಿ ಅಥಣಿ, ಹುಕ್ಕೇರಿ, ರಾಯಭಾಗ, ಬೆಳಗಾವಿ, ಗೋಕಾಕ, ಬೈಲಹೊಂಗಲ ಮುಂತಾದ ಭಾಗಗಳಿಂದ ಸುಮಾರು 50 ಗಾಯಕರು ಆಗಮಿಸಿ ತಮ್ಮ ಕರೋಕೆ ಹಾಡುಗಳನ್ನು ಹಾಡಿದರು.ಕಾರ್ಯಕ್ರಮದಲ್ಲಿ ಯಮಕನಮರಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಸ್.ಆರ್.ತಬರಿ, ಹೊಸಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಸವರಾಜ ಚಿಕ್ಕೋಡಿ, ವಿಜಯ ಕರ್ನಾಟಕ ಮಹಿಳಾ ರಕ್ಷಣಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಶ್ರೀ ಮತ್ತಿಕೊಪ್ಪ, ದೀಪಾ ಪತ್ತಾರ, ಕಸ್ತೂರಿ ಮುದಗನ್ನವರ, ಎಚ್.ಬಿ.ನಾಗಪ್ಪಗೋಳ, ಬಂಡೆಪ್ಪ ಮಾದರ, ಅಜೀತ ಹರಿಜನ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಎಲ್.ಬಿ.ಪೂಜಾರಿ ಸ್ವಾಗತಿಸಿದರು. ಪ್ರೊ.ಶಿವಾನಂದ ಮಠಪತಿ ಹಾಗೂ ಎ.ವೈ.ಸೋನ್ಯಾಗೋಳ ಜಂಟಿಯಾಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.