ಕುಸ್ತಿ ಪಂದ್ಯಾವಳಿಗಳಿಗೆ ಡಾ.ಬಸವಕುಮಾರ ಸ್ವಾಮೀಜಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಈ ಮನಸ್ಸು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಡಾ.ಬಸವಕುಮಾರ ಮಹಾಸ್ವಾಮಿಗಳು ತಿಳಿಸಿದರು.ಇಲ್ಲಿನ ಎಸ್‌ಜೆಎಂ ದಂತ ಮಹಾವಿದ್ಯಾಲಯದ ಆವರಣದಲ್ಲಿ ಎಸ್ ಜೆ ಎಂ ವಿದ್ಯಾಪೀಠ, ಕಾಲೇಜು ಶಿಕ್ಷಣ ಇಲಾಖೆ, ಎಸ್ ಜೆ ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ, ವಿದ್ಯಾರ್ಥಿ ಒಕ್ಕೂಟ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಕುಸ್ತಿ ಪಂದ್ಯಾವಳಿ ಹಾಗೂ ಆಯ್ಕೆ ಪ್ರಕ್ರಿಯೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ದಿವ್ಯಸಾನಿಧ್ಯ ವಹಿಸಿ ಮಾತನಾಡಿದ ಅವರು ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಎಂದು ಹಾರೈಸಿದರು.
ಎಸ್ ಬಿ ಐ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಬ್ರಹ್ಮದೇವ್ ಸಿಂಗ್ ಉದ್ಘಾಟಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ.ಎಲ್.ಈಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ಶಂಕ್ರಪ್ಪ ಸಿ. ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ನಗರದ ಹಿರಿಯ ಪೈಲ್ವಾನರುಗಳಾದ ಶ್ರೀ ತಿಪ್ಪೇಸ್ವಾಮಿ ಪೈಲ್ವಾನ್ , ಆಫೀಜ್ ಪೈಲ್ವಾನ್ ಮತ್ತು ಮೂರ್ತಪ್ಪ ಪೈಲ್ವಾನ್ ಅವರನ್ನು ಡಾ.ಬಸವಕುಮಾರ ಮಹಾಸ್ವಾಮಿಗಳು ಸನ್ಮಾನಿಸಿದರು.ಐಕ್ಯೂಎಸಿ ಸಂಚಾಲಕರಾದ ಶ್ರೀ ಪರಮೇಶ್ವರ ಎಂ.ಎಸ್, ಕರ್ನಾಟಕ ಪೇಪರ್ ಏಜೆನ್ಸಿಯ ಮುಖ್ಯಸ್ಥ ಬಾಬುಲಾಲ್, ವಿಸಡಮ್ ಕಂಪ್ಯೂಟರ್ಸ್ ಸೆಂಟರ್ ಮುಖ್ಯಸ್ಥ ಹರೀಶ ಟಿ, ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಶ್ಚಿತ್ ಎಂ ಉಪಸ್ಥಿತರಿದ್ದರು. ಡಾ. ಗೋವಿಂದಪ್ಪ ಎನ್.ಎಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳಿಂದ ಸುಮಾರು 30-35 ಪುರುಷ ಹಾಗೂ 20-25 ಮಹಿಳಾ ಕುಸ್ತಿಪಟುಗಳು ಭಾಗವಹಿಸಿದ್ದರು.