ತರೀಕೆರೆದೇಶದ ಏಕತೆ, ಸಂಸ್ಕೃತಿ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಜನಸ್ನೇಹಿ ಆಡಳಿತದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಾಗಿದೆ ಎಂದು ಗ್ರಾ ಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ ತಿಳಿಸಿದರು.

ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ದೇಶದ ಏಕತೆ, ಸಂಸ್ಕೃತಿ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಜನಸ್ನೇಹಿ ಆಡಳಿತದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಾಗಿದೆ ಎಂದು ಗ್ರಾ ಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ ತಿಳಿಸಿದರು.ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿದರು. ಪ್ರತಿವರ್ಷವೂ ಜನವರಿ 26ನೇ ದಿನಾಂಕದಂದು ರಾಷ್ಟ್ರೀಯ ಹಬ್ಬವನ್ನಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಮಹಾತ್ಮ ಗಾಂಧೀಜಿ, ಡಾ.ಬಾಬ ಸಾಹೇಬ್ ಅಂಬೇಡ್ಕರ್, ರಾಜೇಂದ್ರ ಪ್ರಸಾದ್ , ಸುಭಾಷ್, ಚಂದ್ರ ಬೋಸ್ ಹಾಗೂ ಜವಾಹರ ಲಾಲ್ ನೆಹರು ಇನ್ನೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಗಣ್ಯರನ್ನು ಸ್ಮರಣೆ ಮಾಡಿ ನಮನಗಳು ಸಲ್ಲಿಸುವ ದಿನವಾಗಿದೆ.

ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ದಿನ ಹಾಗೂ ಸಂವಿಧಾನ ರಚಿಸಿ ಅನುಷ್ಠಾನಕ್ಕೆ ತಂದು,ಇದರ ಚೌಕಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಪ್ರತಿಯೊಬ್ಬರು ಜೀವನದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್ ಧ್ವಜ ಅನಾವರಣ ಮಾಡಿದರು. ಸ್ಥಳೀಯ ಅರಕ್ಷಕ ಠಾಣೆಯ ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಭವಾನಿಗಣೇಶ್, ಶಿವಕಿರಣ್, ಬಾಲರಾಜ್, ಶ್ವೇತ,ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.

-

26ಕೆಟಿಆರ್.ಕೆ.2ಃ

ತರೀಕೆರೆ ಸಮೀಪದ ಲಕ್ಕವಳ್ಳಿ ಗ್ರಾಪಂನಲ್ಲಿ ನಡೆದ 77ನೇ ಗಣರಾಜ್ಯೋತ್ಸವದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರೆಹಮಾನ್ ದ್ವಜಾರೋಹಣ ಮಾಡಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ ಮತ್ತಿತರರು ಭಾಗವಹಿಸಿದ್ದರು.