ಶಾಲೆಗಳು, ಶಿಕ್ಷಣ ವ್ಯವಸ್ಥೆ ಉನ್ನತೀಕರಣಗೊಳಿಸಿದರೆ ಸದೃಢ ಸಮಾಜ: ಸಿ.ಟಿ.ರವಿ

| Published : Sep 14 2025, 01:04 AM IST

ಶಾಲೆಗಳು, ಶಿಕ್ಷಣ ವ್ಯವಸ್ಥೆ ಉನ್ನತೀಕರಣಗೊಳಿಸಿದರೆ ಸದೃಢ ಸಮಾಜ: ಸಿ.ಟಿ.ರವಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳನ್ನು ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರೇ ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದಿಲ್ಲ. ಏಕೆಂದರೆ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಶಾಲೆಗಳು ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಉನ್ನತೀಕರಣಗೊಳಿಸಿದರೆ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅಭಿಪ್ರಾಯಪಟ್ಟರು.ಪಟ್ಟಣದ ಮೈಸೂರು ರಸ್ತೆಯ ವೈಭವ ಪ್ಯಾಲೇಸ್‌ನ ಸಭಾಂಗಣದಲ್ಲಿ ಶನಿವಾರ ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿಯಿಂದ ಆಯೋಜಿಸಿದ್ದ ಸರ್ಕಾರಿ ಶಾಲೆಗಳ ಉನ್ನತೀಕರಣದ ಹೆಜ್ಜೆಗಳು ಎಂಬ ವಿಷಯದ ಕುರಿತ ವಿಚಾರ ಗೋಷ್ಠಿ, ಚಂದ್ರೋದಯ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ ಮತ್ತು ಚಂದ್ರಶೇಖರ ದಡದಪುರ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಗುರುಕುಲ ಶಿಕ್ಷಣದಲ್ಲಿ 16 ರೀತಿಯ ಶಿಕ್ಷಣವನ್ನು ನೀಡುವ ಜೊತೆಗೆ ನಿರುದ್ಯೋಗದ ಸಮಸ್ಯೆ ಇಲ್ಲದೇ ಬದುಕುವುದನ್ನು ಕಲಿಸಲಾಗುತ್ತಿದೆ ಎಂದರು.

ಮಕಾಲೆ ಶಿಕ್ಷಣಕ್ಕೆ ಸ್ವಲ್ಪ ಬದಲಾವಣೆ ತಂದು ದೇಶದಲ್ಲಿ ಅಳವಡಿಸುವ ಮೂಲಕ ಶಿಕ್ಷಣದ ಶಕ್ತಿಯನ್ನು ಕುಗ್ಗಿಸಲಾಗಿದೆ. ಕೇಂದ್ರಡಳಿತ ಶಿಕ್ಷಣ ಅತ್ಯವಶ್ಯಕವಾಗಿದೆ. ಗುತ್ತಿಲ್ಲಮಕಾಲೆ ಶಿಕ್ಷಣದಿಂದ ವಿದ್ಯಾಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳನ್ನು ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರೇ ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದಿಲ್ಲ. ಏಕೆಂದರೆ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಹಿರಿಯ ವಿದ್ಯಾಥಿರ್ಗಳ ಸಹಯೋಗದಲ್ಲಿ ಸರ್ಕಾರಿ ಶಾಲೆಗೆ ಮೂಲ ಸೌಲಭ್ಯ ಕಲ್ಪಿಸದರೇ ಮಕ್ಕಳ ಸಂಖ್ಯೆ ಹೆಚ್ಚಾಗಲಿದೆ ಎಂದರು.

ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ರಾಜ್ಯ ಅಧ್ಯಕ್ಷ ಸುಧಾಕರ ಹೊಸಳ್ಳಿ, ಸರ್ಕಾರಿ ಶಾಲೆಗಳ ಉನ್ನತೀಕರಣದ ಹೆಜ್ಜೆಗಳು ಎಂಬ ವಿಷಯ ಕುರಿತು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯದೊಂದಿಗೆ ನಮ್ಮ ಸಮಿತಿಯು ರಾಜ್ಯದ ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಚಂದ್ರಶೇಖರ ದಡದಪುರ ಅವರು ತಾವು ದುಡಿದ ಹಣದಿಂದಲೇ ಸರ್ಕಾರಿ ಶಾಲೆಗಳ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಅವರ ಅಪಾರ ಸ್ನೇಹ ಬಳಗ ಅವರೊಂದಿಗೆ ಕೈಜೋಡಿಸಿ ಹೊಸದಾಗಿ ಚಂದ್ರೋದಯ ಚಾರಿಟಬರ್‌ ಟ್ರಸ್ಟ್‌ ಆರಂಭಿಸಿ ಶೈಕ್ಷಣಿಕ ಕ್ರಾಂತಿಗೆ ಮುಂದಾಗಿದ್ದಾರೆ. ಈ ಸೇವೆ ನಿರಂತರವಾಗಿ ನಡೆಯಲಿದೆ ಎಂದರು.

ರಾಯಚೂರಿನ ವಿಶ್ವವಿದ್ಯಾನಿಯದ ನಿವೃತ್ತ ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಆಚೀವರ್ಸ್ ಇಂಟರ್‌ ನ್ಯಾಪನಲ್‌ ಸ್ಕೂಲ್‌ ಸಂಸ್ಥಾಪಕ ಚಂದ್ರಶೇಖರ ದಡದಪುರ ಹಾಗೂ ಸರಸ್ವತಿ ದಂಪತಿಯನ್ನು ಅಭಿನಂದಿಸಲಾಯಿತು. ಕಾಯಕ್ರಮದಲ್ಲಿ ಪಾಂಡವಪುರ ತಹಸೀಲ್ದಾರ್ ಎಸ್.ಸಂತೋಷ್ ಸೇರಿದಂತೆ ಇತರರು ಇದ್ದರು.