ಯುವತಿಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಅದರ ನಿವಾರಣೆಗಾಗಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಬೇಕು ಎಂದು ಡಾ.ಲತಾ ರಾಮಚಂದ್ರಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ಹಿರಿಯೂರು
ಯುವತಿಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಅದರ ನಿವಾರಣೆಗಾಗಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಬೇಕು ಎಂದು ಡಾ.ಲತಾ ರಾಮಚಂದ್ರಪ್ಪ ಹೇಳಿದರು.ನಗರದ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ಆರೋಗ್ಯ ದಿನ 2026ರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ತಪಾಸಣೆ ಹಾಗೂ ದೈಹಿಕ, ಮಾನಸಿಕ ಮತ್ತು ಕ್ಯಾನ್ಸರ್ ತಡೆಗಟ್ಟುವ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಸ್ವಚ್ಛ ಆರೋಗ್ಯ ಕಾಪಾಡಿಕೊಳ್ಳಬೇಕು. ಸದೃಢ ಆರೋಗ್ಯಕ್ಕೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.ಯುವಕರು ನಿರಂತರ ವ್ಯಾಯಾಮ, ಯೋಗಾಭ್ಯಾಸ, ಪ್ರಾಣಾಯಾಮ, ಮೆಡಿಟೇಶನ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೇಹ, ಮನಸ್ಸು ಮತ್ತು ಸಮಾಜವನ್ನು ಸ್ವಾಸ್ಥ್ಯವಾಗಿಟ್ಟುಕೊಳ್ಳಬೇಕು. ಯುವಜನರಲ್ಲಿ ಅದರಲ್ಲೂ ಮುಖ್ಯವಾಗಿ ಯುವತಿಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಹರಡುತ್ತಿದ್ದು ಅದರ ನಿವಾರಣೆಗಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಯುವಕರು ಮದ್ಯಪಾನ, ಧೂಮಪಾನ, ಮಾದಕವಸ್ತು ಸೇವನೆಯಂತಹ ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಬೇಕು ಎಂದರು.ಪ್ರಾಂಶುಪಾಲ ಡಾ.ಡಿ.ಧರಣೇಂದ್ರಯ್ಯ ಮಾತನಾಡಿ, ಯುವಜನರು ದುಶ್ಚಟಗಳಿಗೆ ಬಲಿಯಾಗದೇ ಸಮಾಜ ಮತ್ತು ದೇಶ ನಿರ್ಮಾಣದ ಕಾರ್ಯದಲ್ಲಿ ಭಾಗಿಯಾಗಬೇಕಾದರೆ ಉತ್ತಮ ಮತ್ತು ಸಧೃಡ ಆರೋಗ್ಯವನ್ನು ಹೊಂದಿರಬೇಕು. ಸಮಾಜದ ಜನರಲ್ಲಿ ಮಾರಣಾಂತಿಕ ಕಾಯಿಲೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಆರೋಗ್ಯವಂತ ಸಮಾಜ ನಿರ್ಮಿಸಬೇಕು ಎಂದರು.
ಡಾ.ಆರ್.ಗಂಗಾಧರ್ ಮಾತನಾಡಿ, ಆರೋಗ್ಯ ಎಂದರೆ ಬರಿ ಚಿಕಿತ್ಸೆ ಪಡೆಯುವುದಲ್ಲ. ಅದು ದೇಹ, ಮನಸ್ಸು ಮತ್ತು ಸಾಮಾಜಿಕ ವಾತಾವರಣವನ್ನು ತಿಳಿಗೊಳಿಸುವ ಒಂದು ವ್ಯವಸ್ಥೆ. ಆರೋಗ್ಯವೇ ಸಂಪತ್ತು. ಇಂತಹ ಸಂಪತ್ತನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜದ ಮತ್ತು ದೇಶದ ಆರೋಗ್ಯಕರ ಬೆಳವಣಿಗೆಯಲ್ಲಿ ನಾವೆಲ್ಲಾ ಭಾಗಿಯಾಗಬೇಕು ಎಂದರು. ಸದರಿ ಕಾರ್ಯಕ್ರಮದಲ್ಲಿ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ರಾಜ್ಯ ರೆಡ್ ಕ್ರಾಸ್ ನಿರ್ವಹಣಾ ಸಂಸ್ಥೆಯ ನಿರ್ದೇಶಕ ಎo.ಜಿ.ಅನಂತರೆಡ್ಡಿ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಹೆಚ್.ಎಸ್.ಸುಂದರರಾಜ್, ಚಿತ್ರದುರ್ಗ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಜರುಲ್ಲಾ, ಎಂ.ಎಸ್.ರಾಘವೇಂದ್ರ, ಶಶಿಕಲಾ ರವಿಶಂಕರ್ ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.