ಸಾರಾಂಶ
ಬಾಗಲಕೋಟೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆ ಹಾಗೂ ಬಿ.ವ್ಹಿ.ವ್ಹಿ ಸಂಘದ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ರೆಡ್ ರಿಬ್ಬನ್ ಕ್ಲಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆ ಹಾಗೂ ಬಿ.ವ್ಹಿ.ವ್ಹಿ ಸಂಘದ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ರೆಡ್ ರಿಬ್ಬನ್ ಕ್ಲಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಂಗವಾಗಿ ಎಚ್.ಐ.ವಿ. ಏಡ್ಸ್ ನಿಯಂತ್ರಣ ಕುರಿತು ಚಿತ್ರ ಸ್ಪರ್ಧೆ ಏರ್ಪಡಿಸಲಾಗಿತ್ತು. ಮಹಾದೇವಿ ಸಜ್ಜನ ಪ್ರಥಮ, ಐಶ್ವರ್ಯ ದ್ವಿತೀಯ, ತೃತೀಯ ಸ್ಥಾನವನ್ನು ಕುಮಾರ ರಾಘವೇಂದ್ರ ಇಟ್ಟಿ ಮತ್ತು ಸಾಕ್ಷಿ ಹಳ್ಳೂರ ಹಂಚಿಕೊಂಡರು. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಉಪನ್ಯಾಸ : ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆಯ ಜಿಲ್ಲಾ ಮೇಲ್ವಿಚಾರಕ ಎಂ.ಎಚ್. ಸುಬೇದಾರ್ ಏಡ್ಸ್ ನಿಯಂತ್ರಣದಲ್ಲಿ ಯುವಕರ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಡಾ. ಜಯಶ್ರೀ ಇಟ್ಟಿ ವಹಿಸಿದ್ದರು. ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ರೆಡ್ ರಿಬ್ಬನ್ ಕ್ಲಬ್ ಅಧಿಕಾರಿ ಸಂಗಮೇಶ ಪಟ್ಟಣಶೆಟ್ಟಿ, ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.ಉಪನ್ಯಾಸಕಿ ಶರಣಮ್ಮ ಬಂಟನೂರ ನಿರೂಪಿಸಿದರು.