ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ತಾಪುರ
ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ನೇತೃತ್ವ ವಹಿಸುವ ನಾಯಕರು ಇಲ್ಲ ಎನ್ನುವ ಕೊರಗನ್ನು ಕೆಲವೇ ದಿನಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ದೂರ ಮಾಡಲಿದ್ದಾರೆ. ಬರುವ ಕೆಲವೇ ದಿನಗಳಲ್ಲಿ ಕ್ಷೇತ್ರಕ್ಕೆ ಹಾಗೂ ಪಕ್ಷಕ್ಕೆ ಹಗಲಿರುಳು ಸಮಯ ನೀಡುವ ಸೂಕ್ತ ನಾಯಕನನ್ನು ಗುರುತಿಸಿ ಜವಾಬ್ದಾರಿ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.ಪಟ್ಟಣದ ಬಾಪುರಾವ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಬೂತ್ ಅಧ್ಯಕ್ಷರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಚಿತ್ತಾಪುರ ಕ್ಷೇತ್ರದಲ್ಲಿ ಹಗಲಿರುಳು ದುಡಿಯುವ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಇದ್ದಾರೆ. ಬಿಜೆಪಿ ಅಭ್ಯರ್ಥಿ ಯಾರೇ ಇರಲಿ ೭೦ ಸಾವಿರ ಮತದಾರರು ಮಾತ್ರ ಬಿಜೆ ಪರ ಗಟ್ಟಿಯಾಗಿ ಇದ್ದಾರೆ ಎಂದರು.
ಮುಂಬರುವ ತಾಪಂ, ಜಿಪಂ ಚುನಾವಣೆ ಹಿನ್ನಲೆ ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ಬೂತ ಅಧ್ಯಕ್ಷರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡುವ ನಿಟ್ಟಿನಲ್ಲಿ ಸಧೃಡರಾಗಿ ಎಂದು ಕಿವಿಮಾತು ಹೇಳಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ ಮಾತನಾಡಿ, ಭಾರತೀಯ ಜನತಾ ಪಕ್ಷದ ಸಂಘಟನೆಗೆ ಕಾರ್ಯಕರ್ತರೇ ಪ್ರಮುಖ ಅಡಿಪಾಯ. ಹೀಗಾಗಿ ನರೇಂದ್ರ ಮೊದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಅವರು ಮಾಡಿರುವ ಸಾಧನೆಗಳನ್ನು ಮನೆ ಮನೆಗೂ ತಿಳಿಯಪಡಿಸುವ ಕೆಲಸ ಮಾಡಬೇಕು. ಸಂಘಟನೆಯ ಮೂಲಕ ಬಿಜೆಪಿ ಪಕ್ಷವು ಬೆಳೆದು ಬಂದಿದೆ. ಇಂದು ದೇಶದ ಚುಕ್ಕಾಣಿ ಹಿಡಿದಿದೆ. ಪಕ್ಷದ ಜವಬ್ದಾರಿ ವಹಿಸಿಕೊಡ ನೂತನ ಪದಾಧಿಕಾರಿಗಳು ಪಕ್ಷದ ಸಂಘಟನೆಯಲ್ಲಿ ನಿರತರಾಗಿ ಮತ್ತೆ ರಾಜ್ಯದಲ್ಲಿ ಹಾಗೂ ತಾಪಂ, ಜಿಪಂ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದರು.
ಮಾಜಿ ಸಚಿವ ಬಾಬುರಾವ ಚವ್ವಾಣ, ಅಶೊಕ ಬಗಲಿ ಮಾತನಾಡಿದರು. ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮುಖಂಡರಾದ ಲಿಂಗರಾಜ ಬಿರಾದಾರ, ಲಿಂಗಾರೆಡ್ಡಿ ಭಾಸರೆಡ್ಡಿ, ವಿಠಲ ನಾಯಕ, ಬಸವರಾಜ ಬೆಣ್ಣೂರಕರ್, ಚಂದ್ರಶೇಖರ ಅವಂಟಿ, ಸೊಮಶೇಖರ ಪಾಟೀಲ್, ನಾಗರಾಜ ಬಂಕಲಗಿ, ಗೊಪಾಲ ರಾಠೋಡ, ಆನಂದ ಪಾಟೀಲ್ ನರಿಬೋಳ ಇತರರು ಇದ್ದರು.ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಪ್ರಾಸ್ತವಿಕವಾಗಿ ಮಾತನಾಡಿದರು. ನಾಗರಾಜ ಹೂಗಾರ ನಿರೂಪಿಸಿದರು.