ಜಿಲ್ಲಾ ತರಬೇತು ಸಂಸ್ಥೆಯ ಪ್ರಾಂಶುಪಾಲ ಡಾ. ಕಿಶೋರ್‌ ಕುಮಾರ್‌ ಮಾತನಾಡಿ, ಕ್ಷಯರೋಗ ಮುಕ್ತ ಭಾರತಕ್ಕೆ ಇರುವ ಜವಾಬ್ದಾರಿಯನ್ನು ಪ್ರತೀಯೊಬ್ಬರು ಪಾಲಿಸಬೇಕು. ಆರೋಗ್ಯ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಅತ್ಯಂತ ಪ್ರಾಚೀನ ಕಾಯಿಲೆಯಾದ ಕ್ಷಯರೋಗ ಪ್ರಸ್ತುತ ದಿನಗಳಲ್ಲೂ ಕೂಡ ಅಪಾಯಕಾರಿಯಾಗಿಯೇ ಉಳಿದಿದೆ. ಕ್ಷಯ ರೋಗ ಮುಕ್ತ ದೇಶವಾಗಿಸುವ ನಿಟ್ಟಿನಲ್ಲಿ ಪಣತೊಡಬೇಕಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾ​ಧಿಕಾರಿ ಡಾ. ಎಚ್‌.ಆರ್‌. ತಿಮ್ಮಯ್ಯ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿ​ಕಾರಿಗಳ ಕಚೇರಿ ವತಿಯಿಂದ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯ ಆರ್‌ಪಿಸಿಸಿ ಸಭಾಂಗಣದಲ್ಲಿ ಶನಿವಾರ ನಡೆದ 100 ದಿನಗಳ ಕ್ಷಯರೋಗದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲಾ ತರಬೇತು ಸಂಸ್ಥೆಯ ಪ್ರಾಂಶುಪಾಲ ಡಾ. ಕಿಶೋರ್‌ ಕುಮಾರ್‌ ಮಾತನಾಡಿ, ಕ್ಷಯರೋಗ ಮುಕ್ತ ಭಾರತಕ್ಕೆ ಇರುವ ಜವಾಬ್ದಾರಿಯನ್ನು ಪ್ರತೀಯೊಬ್ಬರು ಪಾಲಿಸಬೇಕು. ಆರೋಗ್ಯ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.

ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್‌, ಕ್ಷಯರೋಗ ನಿಯಂತ್ರಣಾಧಿಕಾರಿ ಖತೀಜಾ ದಿಲ್ಶದ್‌, ಆಶ್ರಿತ ರೋಗ ನಿಯಂತ್ರಣಾಧಿಕಾರಿ ಡಾ. ಜಸಿಂತಾ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಸುದರ್ಶನ್‌ ಇದ್ದರು.ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ನಿರೂಪಿಸಿದರು. ಲೋಕೇಶ್‌ ವಂದಿಸಿದರು.