ಸಾಧಾರಣ ವ್ಯಕ್ತಿಯನ್ನು ಅಸಾಮಾನ್ಯ ಮಾಡುವ ಶಕ್ತಿ ಶಿಕ್ಷಕರಿಗಿದೆ : ಹಳೇಕೋಟೆ ರಮೇಶ್‌

| Published : Oct 04 2024, 01:01 AM IST

ಸಾಧಾರಣ ವ್ಯಕ್ತಿಯನ್ನು ಅಸಾಮಾನ್ಯ ಮಾಡುವ ಶಕ್ತಿ ಶಿಕ್ಷಕರಿಗಿದೆ : ಹಳೇಕೋಟೆ ರಮೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಮೂಡಿಗೆರೆ, ಸಾಧಾರಣ ವ್ಯಕ್ತಿಯೊಬ್ಬ ಅಸಾಮಾನ್ಯ ಸಾಧನೆ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಕರ ಪಾತ್ರ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಅಕ್ಷರಾಭ್ಯಾಸ ಮಾಡಿಸಿದ ಗುರುಗಳು ಎಂದಿಗೂ ಅಜಾರಾಮರ ಎಂದು ಸಾಹಿತಿ ಹಳೇಕೋಟೆ ರಮೇಶ್ ಹೇಳಿದರು.

ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಸಿರಿಗನ್ನಡ ವೇದಿಕೆಯಿಂದ ಸಾಧಕರಿಗೆ ಅಭಿನಂದನೆ

ಕನ್ನಡಪ್ರಭ ವಾರ್ತೆ, ಮೂಡಿಗೆರೆಸಾಧಾರಣ ವ್ಯಕ್ತಿಯೊಬ್ಬ ಅಸಾಮಾನ್ಯ ಸಾಧನೆ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಕರ ಪಾತ್ರ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಅಕ್ಷರಾಭ್ಯಾಸ ಮಾಡಿಸಿದ ಗುರುಗಳು ಎಂದಿಗೂ ಅಜಾರಾಮರ ಎಂದು ಸಾಹಿತಿ ಹಳೇಕೋಟೆ ರಮೇಶ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಸಿರಿಗನ್ನಡ ವೇದಿಕೆಯಿಂದ ಹಮ್ಮಿಕೊಂಡಿದ್ಧ ಸಾಧಕರಿಗೆ ಅಭಿನಂದನೆ ಹಾಗೂ ಕ್ರೀಡಾ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಶಿಸ್ತು, ಸಂಯಮ, ವಿಧೇಯತೆ ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳ ಮಾನಸಿಕ ಅರೋಗ್ಯದ ಮೇಲೆ ವಿಪರೀತ ದುಷ್ಪರಿಣಾಮಗಳು ಬಿರುತ್ತಿರುವುದು ನೋವಿನ ಸಂಗತಿ. ಹೀಗಾಗಿ ಅತಿ ಹೆಚ್ಚು ಪುಸ್ತಕಗಳ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಸಿರಿಗನ್ನಡ ವೇದಿಕೆ ಪ್ರಧಾನ ಕಾರ್ಯದರ್ಶಿ ಡಾ.ಮೋಹನ್ ರಾಜಣ್ಣ ಮಾತನಾಡಿ, ಮನುಷ್ಯನಿಗೆ ಮೌಲ್ಯಧಾರಿತ ಜೀವನ ಕಲಿಸುವುದೇ ನಿಜವಾದ ಶಿಕ್ಷಣ. ಶಿಕ್ಷಕರು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ರೂಪಿಸುವ ಶಿಲ್ಪಗಳಾಗಿದ್ದಾರೆ. ಆದ್ದರಿಂದ ಶಿಕ್ಷಕರು ಮಕ್ಕಳ ನಾಡಿ ಮಿಡಿತ ಅರಿತು ವಿದ್ಯೆ ಕಲಿಸಬೇಕು ಎಂದು ಹೇಳಿದರು.ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್.ಪೂರ್ಣೇಶ್ ಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ. ವ್ಯಾಸಂಗದ ಜೊತೆಗೆ ಮುಂದಿನ ಜವಾಬ್ದಾರಿ ಅರಿವು ಕೂಡ ನಿಮಗಿರಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿ ಸಮಾ ಜದಲ್ಲಿ ಪರಿವರ್ತನೆ ಬೆಳಕು ತರುವ ಕೆಲಸ ಶಿಕ್ಷಕರು ಪ್ರಾಮಾಣಿಕವಾಗಿ ಮಾಡಬೇಕು ಎಂದರು.ಇದೇ ವೇಳೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಸ್ಮಿನ್ ಸುಲ್ತಾನ್ ಸನ್ಮಾನಿಸಲಾಯಿತು. ದಾನಿಗಳಾದ ಚಂದ್ರಮತಿ ಚಂದ್ರ ಶೇಖರಯ್ಯ ಅವರಿಂದ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಅಧ್ಯಕ್ಷ ಬಿ.ಎಸ್.ಓಂಕಾರ್‌, ಖಜಾಂಚಿ ಹಮೀದ್ ಸಬ್ಬೆನಹಳ್ಳಿ, ಪಟ್ಟಣ ಪಂಚಾಯಿತಿ ಸದಸ್ಯೆ ಕಮಲಮ್ಮ, ಶಾಲಾಭಿರುದ್ಧಿ ಸಮಿತಿ ಅಧ್ಯಕ್ಷೆ ಸಮೀನಾ ಬಾನು, ಮುಖಂಡರಾದ ಮೈದಿನ್ ಇಸ್ಮಾಯಿಲ್, ಗಂಗಾಧರಪ್ಪ, ಕುಮಾರ್ ರಾಜ್, ಆನಂದ್ ರಾಜ್, ಶಿಕ್ಷಕರಾದ ತೋಟಪ್ಪ, ಭಾರತಿ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

2 ಕೆಸಿಕೆಎಂ 4ಮೂಡಿಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಸಿರಿಗನ್ನಡ ವೇದಿಕೆಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಅಭಿನಂದನಾ ಹಾಗೂ ಕ್ರೀಡಾ ಸಾಮಾಗ್ರಿ ವಿತರಣಾ ಕಾರ್ಯಕ್ರಮವನ್ನು ಸಾಹಿತಿ ಹಳೇಕೋಟೆ ರಮೇಶ್ ಉದ್ಘಾಟಿಸಿ ಮಾತನಾಡಿದರು. ಡಾ.ಮೋಹನ್ ರಾಜಣ್ಣ, ಪೂರ್ಣೇಶ್‌ಮೂರ್ತಿ ಇದ್ದರು.