ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಜೈಲು ಪಾಲು

| Published : Jan 15 2024, 01:46 AM IST

ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಜೈಲು ಪಾಲು
Share this Article
  • FB
  • TW
  • Linkdin
  • Email

ಸಾರಾಂಶ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಣಮೇಗೌಡ ಎಂಬುವರು ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಣಮೇಗೌಡ ಎಂಬುವವರು ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಮಾಡ್ಸೋದಾಗಿ ಹೇಳಿ ವಿದ್ಯಾರ್ಥಿನಿಯರಿಗೆ ವಿಶೇಷ ಕ್ಲಾಸ್‌ ನೆಪದಲ್ಲಿ ಕೋಣೆಗೆ ಕರೆಸಿಕೊಳ್ಳುತ್ತಿದ್ದರು. ಇದಕ್ಕೆ ಪ್ರತಿರೋಧಿಸಿದರೆ ಫೇಲ್‌ ಮಾಡಿಸುವ ಬೆದರಿಕೆ ಕೂಡ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

ದೂರು ಕೊಡಲು ಮುಂದಾಗುತ್ತಿದ್ದ ಪಾಲಕರಿಗೆ ಸ್ಥಳೀಯ ಗ್ರಾಮ ಪ್ರಮುಖರು, ಇತರ ರಾಜಕೀಯ ಮುಖಂಡರ ಮೂಲಕ ಬೆದರಿಕೆ ಹಾಕಿಸುತ್ತಿದ್ದ. ಅಲ್ಲದೆ, ದೂರು ಕೊಟ್ಟರೆ ವಿಷಯ ಮಾಧ್ಯಮಗಳಲ್ಲಿ ಬರುತ್ತದೆ. ಆಗ ನಿಮ್ಮನ್ನು ಯಾರು ಮದುವೆ ಮಾಡ್ಕೋತಾರೆ ಎಂದು ವಿದ್ಯಾರ್ಥಿನಿಯರಿಗೆ ಬೆದರಿಸುತ್ತಿದ್ದ. ಕಳೆದ 2-3 ವರ್ಷಗಳಿಂದಲೂ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲಿನ ಒಂದಿಬ್ಬರು ಸಿಬ್ಬಂದಿ ಇದಕ್ಕೆ ಪರೋಕ್ಷವಾಗಿ ಸಹಕರಿಸುತ್ತಿದ್ದರು. ಕೆಲವೊಮ್ಮೆ ಕೆಲ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು, ಬ್ಲಾಕ್‌ಮೇಲ್‌ ಕೂಡ ಮಾಡಲಾಗುತ್ತಿತ್ತು. ಈತನ ಕಿರುಕುಳ ತಾಳದೆ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಳು ಎನ್ನಲಾಗಿದೆ.