ಸಾರಾಂಶ
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ವತಿಯಿಂದ 25 ಮಂದಿ ಪತ್ರಾಂಕಿತ ಅಧಿಕಾರಿಗಳ ತಂಡ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಸಂವಾದ ನಡೆಸಿತು. ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿಯು ಸುಸ್ಥಿರ ಅಭಿವೃದ್ಧಿ ಗುರಿಗಾಗಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಕ್ಷೇತ್ರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ವತಿಯಿಂದ 25 ಮಂದಿ ಪತ್ರಾಂಕಿತ ಅಧಿಕಾರಿಗಳ ತಂಡ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಸಂವಾದ ನಡೆಸಿತು.ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿಯು ಸುಸ್ಥಿರ ಅಭಿವೃದ್ಧಿ ಗುರಿಗಾಗಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಕ್ಷೇತ್ರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಅಂಗನವಾಡಿ ಸಮುದಾಯ ಕೇಂದ್ರಗಳು, ಕುಡಿಯುವ ನೀರಿನ ಮೂಲಗಳು, ಶುದ್ದೀಕರಣ ಘಟಕಗಳು, ಕೃಷಿ ತೋಟಗಾರಿಕೆ ಸಂಬಂಧಿತ ಕಾರ್ಯಕ್ರಮಗಳ ಅನುಷ್ಠಾನ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ನಂತರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಸಂವಾದ ಹಮ್ಮಿಕೊಳ್ಳಲಾಯಿತು.
ಕ್ಷೇತ್ರ ಭೇಟಿಯಿಂದ ಕಂಡುಬಂದ ಅಂಶಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರೊಂದಿಗೆ ವಿಸ್ತೃತ ಚರ್ಚೆ ನಡೆದು ಈಗಾಗಲೇ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ಕಾರ್ಯಕ್ರಮಗಳ ಬಗ್ಗೆ ತಂಡವು ಮೆಚ್ಚುಗೆ ವ್ಯಕ್ತಪಡಿಸಿತು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಮಾದಪ್ಪ ಹಾಗೂ ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಸದಸ್ಯರು ಇದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಕ್ರಮಗಳ ವಿವರ ಮಂಡಿಸಿದರು. ಕಾರ್ಯದರ್ಶಿ ಕುಮಾರಸ್ವಾಮಿ ಸ್ವಾಗತಿಸಿ, ವಂದಿಸಿದರು