ಬ್ರಹ್ಮಾವರ: ಇಲ್ಲಿನ ಮಕ್ಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ವಿಶ್ವ ಬುಡಕಟ್ಟು ದಿನಾಚರಣೆ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮನವನ್ನು ಉದ್ಘಾಟಿಸಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಮಾತನಾಡುತ್ತಾ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, ಮೌಕಿಕ ಪರಂಪರೆ ಹಾಗೂ ಪ್ರದರ್ಶನ ಕಲೆಗಳ ಕುರಿತು ಪಠ್ಯ ಆಗಬೇಕು ಹಾಗೂ ಪ್ರತ್ಯೇಕ ಕರ್ನಾಟಕ ಬುಡಕಟ್ಟು ಅಕಾಡೆಮಿ ಸ್ಥಾಪನಾಗಬೇಕೆಂದು ಸರ್ಕಾರವನ್ನು ಅಗ್ರಹಿಸಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ ಜನಪದ ಹಾಗೂ ಬುಡಕಟ್ಟು ಕಲಾವಿದರ ಕುರಿತು ಉಡುಪಿ ಜಿಲ್ಲಾದ್ಯಂತ ಸಮೀಕ್ಷೆ ಕೈಗೊಳ್ಳಲಾಗುವುದು. ಪರಿಷತ್ ದಶಮಾನೋತ್ಸವ ಅಂಗವಾಗಿ ಗ್ರಾಮ ಘಟಕಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಹಿರಿಯ ಕುಡುಬಿ ಹೋಳಿ ಕಲಾವಿದರಾದ ಶೀನ ನಾಯ್ಕ್ ಮಂಡಕರ ಹಾಗೂ ರಾಮಣ್ಣ ನಾಯ್ಕ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಕುಡುಬಿ ಸಮುದಾಯದ ನೃತ್ಯ ಪ್ರದರ್ಶನ ಹಾಗೂ ಕೋಲಾಟವನ್ನು ಏರ್ಪಡಿಸಲಾಗಿತ್ತು.ದೇಗುಲದ ಟ್ರಸ್ಟಿಗಳಾದ ರಾಜಾರಾಮ್ ಶೆಟ್ಟಿ, ಪ್ರತಾಪ್ ಶೆಟ್ಟಿ ಕೊಳ್ಕೆಬೈಲು, ಜಿಲ್ಲಾ ಪ್ರ. ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು, ಸದಾನಂದ ಉಪಸ್ಥಿತರಿದ್ದರು.
ಕುಡುಬಿ ಕಲೆ ಕಲಾವಿದರ ಬಗ್ಗೆ ಪಠ್ಯ ರಚನೆಯಾಗಲಿ: ಡಾ. ಎಸ್ ಬಾಲಾಜಿ
ಇಲ್ಲಿನ ಮಕ್ಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ವಿಶ್ವ ಬುಡಕಟ್ಟು ದಿನಾಚರಣೆ ಆಯೋಜಿಸಲಾಗಿತ್ತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.