ಪತ್ರಕರ್ತ ವಸಂತ ನಾಡಗೇರಗೆ ನುಡಿನಮನ

| Published : Sep 11 2024, 01:01 AM IST

ಸಾರಾಂಶ

ಕನ್ನಡ ಪತ್ರಿಕೋದ್ಯಮದಲ್ಲಿ ತಲೆಬರಹ ನೀಡುವುದರಲ್ಲಿ ವಸಂತ ನಾಡಿಗೇರ ವಿನೂತನ ಪ್ರಯೋಗ ಮಾಡುತ್ತಿದ್ದರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ತುಕಾರಂ ಬಣ್ಣಿಸಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಕನ್ನಡ ಪತ್ರಿಕೋದ್ಯಮದಲ್ಲಿ ತಲೆಬರಹ ನೀಡುವುದರಲ್ಲಿ ವಸಂತ ನಾಡಿಗೇರ ವಿನೂತನ ಪ್ರಯೋಗ ಮಾಡುತ್ತಿದ್ದರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ತುಕಾರಂ ಬಣ್ಣಿಸಿದರು.

ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳವಾರ ಪತ್ರಕರ್ತರ ಭವನದಲ್ಲಿ ಅಗಲಿದ ಪತ್ರಕರ್ತ ವಸಂತ್ ನಾಡಿಗೇರ ಅವರಿಗೆ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಿಗೇರ ಅವರಿಗೆ ಭಾಷೆ ಮೇಲೆ ಹಿಡಿತ ಇತ್ತು. ಆ ಕಾರಣಕ್ಕಾಗಿಯೇ ಉತ್ತಮ ತಲೆಬರಹ ನೀಡುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶಿಯಾಗಿಯೂ ಇದ್ದರು ಎಂದು ಸ್ಮರಿಸಿದರು.

ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಸಂಗೇನಹಳ್ಳಿ ಅಶೋಕ್ ಕುಮಾರ್, ಜಗಳೂರು ಯಾದವರೆಡ್ಡಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್. ದಯಾನಂದ್, ಹಿರಿಯ ಪತರ್ಕರ್ತರಾದ ಬಸವರಾಜ್, ನಾಕಿಕೆರೆ ತಿಪ್ಪೇಸ್ವಾಮಿ ಇದ್ದರು.

---------

ಚಿತ್ರದುರ್ಗದ ಕಾರ್ಯನಿರತರ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ವಸಂತನಾಡಿಗೇರ ಅವರ ನುಡಿನಮನ ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ತುಕಾರಂ ಮಾತನಾಡಿದರು.10 ಸಿಟಿಡಿ6