ಸಾರಾಂಶ
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆಯಲ್ಲಿ ನಿವೃತ್ತಿ ಹೊಂದಿದ ನಿಮಿತ್ತ ಹಮ್ಮಿಕೊಂಡ ಸಮಾರಂಭದಲ್ಲಿ ಸನ್ಮಾನ ಸಮಾರಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಎಸ್.ಡಿ.ಎಂ.ಸಿ ಅಧ್ಯಕ್ಷ ಜಬ್ಬಾರ ಅರಬ ಮಾತನಾಡಿ, ಶಿಕ್ಷಕರು ತಮ್ಮ ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದಲೇ ತಮ್ಮ ಶಿಷ್ಯರ ಮನಃ ಪಟಲದಲ್ಲಿ ಸದಾ ನಿಲ್ಲುತ್ತಾರೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಉತ್ತಮ ಶಿಕ್ಷಕರಿಂದಲೇ ಸಾಧ್ಯವಾಯಿತು ಎಂದರು.
ಸಿ.ಆರ್.ಪಿ ಪರ್ವೆಜ ಪಟೇಲ್, ಗುಲಾಂ ಬಾಗವಾನ, ಯಾಸೀನ ತುರ್ಕಿ, ಫಯಜ್ ಅಹ್ಮದ ಖತೀಬ, ಜೆ.ಡಿ.ರಿಸಾಲದಾರ, ಕೆ.ಎಂ.ಬಾಗವಾನ, ಫೈರೂಜ್ ಟೇಲರ್ ಇತರರು ಈ ಸಂದರ್ಭದಲ್ಲಿ ಇದ್ದರು.