ಸಾರಾಂಶ
ಮಾನವ ಸರಪಳಿ ನಿರ್ಮಿಸಿ ಆಕ್ರೋಶ
ಹನೂರು: ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ಇಲ್ಲಿನ ಜನತೆ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ ಮೂಲಕ ಬುಧವಾರ ಹನೂರು ಪಟ್ಟಣ್ಕಕ್ಕೆ ಆಗಮಿಸಿ, ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಹಾಗೂ ಪ್ರತಿಭಟನೆಯ ಮೂಲಕ ತಿಳಿಸಿದ್ದರೂ ಈ ಭಾಗದಲ್ಲಿ ವಿದ್ಯುತ್ ಇಲ್ಲ, ಕುಡಿಯುವ ನೀರಿಲ್ಲ, ಆಸ್ಪತ್ರೆಗೆ ತೆರಳಬೇಕಾದರೆ ನೂರಾರು ಕಿಮೀ ಹೋಗಬೇಕಾಗಿದೆ. ಗ್ರಾಮಾಂತರ ಗುಡ್ಡಗಾಡು ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಯಿಲ್ಲ. ಇಲ್ಲಿನ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಗ್ರಾಮಗಳಿಗೆ ಬಂದು ರೈತರ ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಕೇಳುವುದಿಲ್ಲ, ಅರಣ್ಯ ಇಲಾಖೆಯ ಅಧಿಕಾರಿಗಳಂತೂ ರೈತರಿಗೆ ಮತ್ತು ಕಾಡಂಚಿನ ಗ್ರಾಮದ ಜನತೆಗೆ ಕಿರುಕುಳ ನೀಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಸಹ ಇಲ್ಲಿನ ಜನತೆ ಮೂಲಭೂತ ಸೌಲಭ್ಯಗಳನ್ನು ಪಡೆಯಲು ವಂಚಿತರಾಗಿದ್ದಾರೆ. ಸರ್ಕಾರ ಹಾಗೂ ಇಲ್ಲಿನ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಪ್ಪಣೆ ಪಡೆದು ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಶಾಂತಿಯುತವಾಗಿ ಕೈಗೆ ಕಪ್ಪುಪಟ್ಟಿ ಕಟ್ಟಿ ಸರ್ಕಾರದ ಗಮನ ಸೆಳೆಯಲು ಹೋರಾಡುತ್ತಿದ್ದೇವೆ, ಇನ್ನಾದರೂ ಸಂಬಂಧಪಟ್ಟ ಸರ್ಕಾರ, ಜನಪ್ರತಿನಿಧಿಗಳು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹನೂರು ತಾಲೂಕು ಘಟಕದ ಅಧ್ಯಕ್ಷ ಚಂಗಡಿ ಕರಿಯಪ್ಪ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))