ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಹಾಗೂ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದಿಸಲಾಯಿತು.ನಗರದ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರ ವಿಶೇಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಮಾಧ್ಯಮ ಅಕಾಡೆಮಿಗೆ ನೇಮಕಗೊಂಡ ಸಂಘದ ಜಿಲ್ಲಾಧ್ಯಕ್ಷರೂ ಆಗಿರುವ ಸಂಗಮೇಶ ಚೂರಿ ಅವರಿಗೆ ಸಂಘದ ಪರವಾಗಿ ಹಿರಿಯ ಪತ್ರಕರ್ತ ಹಾಗೂ ಸಲಹಾ ಸಮಿತಿ ಸದಸ್ಯರಾದ ವಾಸುದೇವ ಹೆರಕಲ್ ಅವರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಸನ್ಮಾನಿಸಿದರು. ಸಭೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಖಜಾಂಚಿ ರಾಹುಲ ಆಪ್ಟೆ, ರಾಜ್ಯ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಐ.ಎಫ್.ಡಬ್ಲ್ಯೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಶಶಿಕಾಂತ ಮೆಂಡೆಗಾರ, ಮೊಹ್ಮದಸಮೀರ ಇನಾಮದಾರ, ಬಸವರಾಜ ಉಳ್ಳಾಗಡ್ಡಿ, ನಾಗಪ್ಪ ನಾಗೂರ, ಸುನೀಲ ಕಾಂಬಳೆ, ಸಲಹಾ ಸಮಿತಿ ಸದಸ್ಯರಾದ ದೇವೇಂದ್ರ ಹೆಳವರ, ಸೀತಾರಾಮ ಕುಲಕರ್ಣಿ, ಇರ್ಫಾನ್ ಶೇಖ್, ಪತ್ರಕರ್ತರಾದ ಸಂಜೀವ್ ಕುಲಕರ್ಣಿ, ಎಸ್.ಬಿ.ಪಾಟೀಲ ಉಪಸ್ಥಿತರಿದ್ದರು.ಸಂಗಮೇಶ ಚೂರಿ ಅವರು ತುಂಬಾ ಕ್ರಿಯಾಶೀಲರಾಗಿದ್ದು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ, ಗೌರವ ಸಿಗಲಿ.
-ವಾಸುದೇವ ಹೆರಕಲ್, ಹಿರಿಯ ಪತ್ರಕರ್ತರು.