ಸಾರಾಂಶ
ಕನ್ನಡಪ್ರಭ ವಾರ್ತೆ ಸಿಂದಗಿ
ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಮೂಲಕ ಸಭಾಧ್ಯಕ್ಷ ಯು.ಟಿ.ಖಾದರ ಅವರು ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಇದು ಸಭಾಧ್ಯಕ್ಷರ ನಿರ್ಧಾರವೋ ಅಥವಾ ಸರ್ಕಾರದ ನಿರ್ಧಾರವೋ ಎಂಬುದನ್ನು ಹೇಳಬೇಕು. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಒತ್ತಾಯಿಸಿದರು.ಪಟ್ಟಣದ ಮಾಜಿ ಶಾಸಕ ರಮೇಶ ಭೂಸನೂರ ಮನೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹನಿಟ್ರ‍್ಯಾಪ್ ಪ್ರಕರಣ ಸಿಬಿಐ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು. ಇಲ್ಲವಾದರೆ ರಾಜ್ಯಾದ್ಯಂತ ಮಾ.26 ರಿಂದ ಒಂದು ವಾರಗಳ ಕಾಲ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ತುಷ್ಠೀಕರಣ ಮಾಡುತ್ತಿದ್ದು, ಮುಸ್ಲಿಂರು ಮಾತ್ರ ಮತ ಹಾಕಿದ್ದಾರೆ ಎನ್ನುವಂತೆ ಶೇ.4ರಷ್ಟು ಮೀಸಲಾತಿ, ಮದುವೆಯಾಗುವವರಿಗೆ ₹ 50 ಸಾವಿರ, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೆ ₹ 30 ಲಕ್ಷ ನೀಡುತ್ತಿದೆ. ನಾವು ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ನಿಲ್ಲಿಸಿದೆ. ಹೀಗಾಗಿ, ಕಾಂಗ್ರೆಸ್ ತನ್ನ ಹೆಸರು ಬದಲಾಯಿಸಿಕೊಳ್ಳಬೇಕೆಂದು ಕಿಡಿಕಾರಿದರು.ಸರ್ಕಾರ ನೀಡಿದ ತೊಗರಿ ಬೀಜಗಳು ಸಂಪೂರ್ಣ ವಿಫಲವಾಗಿವೆ. ಇದಕ್ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಪ್ರಸ್ತುತ 12 ಸಾವಿರ ಹೆಕ್ಟೇರ್ ನಾಶವಾಗಿದೆ. ಕೂಡಲೇ ಸಂಬಂಧಿಸಿದ ಸಚಿವರು, ಸಿಎಂ ಸೇರಿ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದು ಪರಿಹಾರ ನೀಡಬೇಕು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಎಕರೆಗೆ ₹ 25 ಸಾವಿರ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡಿದ್ದರು ಎಂದು ನೆನಪಿಸಿದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮತ್ತು ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಸರ್ಕಾರ ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು. ಕೇಂದ್ರದಿಂದ ₹ 7,550 ನೀಡಲಾಗುತ್ತಿದೆ. ರಾಜ್ಯದ ₹ 450 ನೀಡುತ್ತಿಲ್ಲ. ಇದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಬಿ.ಎಚ್.ಬಿರಾದಾರ, ಪೀರು ಕೆರೂರು, ಪ್ರಶಾಂತ ಕದ್ದರಕಿ, ಗುರು ತಳವಾರ, ಎನ್.ಎಸ್.ಹಿರೇಮಠ ಸೇರಿದಂತೆ ಇತರರು ಇದ್ದರು.23ಎಸ್‌ಎನ್‌ಡಿ01: ಸಿಂದಗಿ ಪಟ್ಟಣದ ಮಾಜಿ ಶಾಸಕ ರಮೇಶ ಭೂಸನೂರ ಅವರ ನಿವಾಸದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಮಾತನಾಡಿದರು.
ಕೋಟ್್ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದ್ದು, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧ ಭಾಗದ ರೈತರ ತೊಗರಿ ಬೆಳೆ ಸಂಪೂರ್ಣ ನಾಶಗೊಂಡಿದೆ. ಆದರೂ, ಪರಿಹಾರ ನೀಡುತ್ತಿಲ್ಲ. ಬೆಂಬಲ ಬೆಲೆಯ ಹಣವನ್ನು ಹಾಕುತ್ತಿಲ್ಲ. ಮಾಜಿ ಶಾಸಕರು ಯಾವುದೇ ಕಾಮಗಾರಿ ಮಾಡಿಲ್ಲ. ಅವರ ಪಾತ್ರವೇ ಏನಿಲ್ಲ ಎಂಬಂತೆ ಹಾಲಿ ಶಾಸಕರು ಬಿಂಬಿಸುತ್ತಿದ್ದಾರೆ.
ಎನ್.ರವಿಕುಮಾರ್, ವಿ.ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ