ಸುಸೂತ್ರವಾಗಿ ನೆರವೇರಿದ ಮಸ್ಟರಿಂಗ್ ಕಾರ್ಯ

| Published : Nov 13 2024, 12:03 AM IST / Updated: Nov 13 2024, 12:04 AM IST

ಸಾರಾಂಶ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಮತದಾನ ನ. 13ರ ಬುಧವಾರ ಬೆಳಿಗ್ಗೆ 7 ರಿಂದ ಆರಂಭಗೊಳ್ಳಲಿದ್ದು, ಈ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಪೆಟ್ಟಿಗೆಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಸುಸೂತ್ರವಾಗಿ ನೆರವೇರಿತು.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಮತದಾನ ನ. 13ರ ಬುಧವಾರ ಬೆಳಿಗ್ಗೆ 7 ರಿಂದ ಆರಂಭಗೊಳ್ಳಲಿದ್ದು, ಈ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಪೆಟ್ಟಿಗೆಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಸುಸೂತ್ರವಾಗಿ ನೆರವೇರಿತು.

ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. ರಾಮನಗರದ ಅರ್ಚಕರಹಳ್ಳಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಸ್ಟರಿಂಗ್ ಕಾರ್ಯಗಳ ಪ್ರಕ್ರಿಯೆಯನ್ನು ವೀಕ್ಷಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗಿದ ಅರ್ಚಕರಹಳ್ಳಿಯ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಹಾಗೂ ಅರೆ ಸೇನಾಪಡೆಯ ಸಿಬ್ಬಂದಿ ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸೇರಿದಂತೆ ಒಟ್ಟಾರೆ 69 ವಾಹನಗಳು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿದ್ದವು.

ಅಚ್ಚುಕಟ್ಟಾದ ವ್ಯವಸ್ಥೆ:

ಅರ್ಚಕರಹಳ್ಳಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು. ಇವಿಎಂ ಯಂತ್ರಗಳು, ವಿವಿಪ್ಯಾಟ್, ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್, ಕಂಪಾರ್ಟ್ಮೆಂಟ್ , ಅಳಿಸಲಾಗದ ಶಾಯಿ ಸೇರಿದಂತೆ ಚುನಾವಣಾ ಸಾಮಗ್ರಿಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕುಡಿಯುವ ನೀರು ಹಾಗೂ ಉಟೋಪಹಾರದ ವ್ಯವಸ್ಥೆ ಕೈಗೊಳ್ಳಲಾಯಿತು. ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಭೊಜನ ಪೂರೈಸಿಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಮಧ್ಯಾಹ್ನದ ಊಟ ಸವಿದ ಅಧಿಕಾರಿ, ಸಿಬ್ಬಂದಿಗಳು, ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಆಯಾ ಮಾರ್ಗದ ವಾಹನಗಳ ಮೂಲಕ ತೆರಳಿದರು.

ಬಾಕ್ಸ್ .................

ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಕಾರ್ಯ ನ.13 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಡೆಯಲಿದ್ದು, ಸುಗಮ ಮತದಾನಕ್ಕೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಅರ್ಹ ಮತದಾರರು ತಪ್ಪದೆ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಲಿ ಎಂಬುದು ಜಿಲ್ಲಾಡಳಿತದ ಆಶಯವಾಗಿದೆ.

-------------------------

12ಕೆಆರ್ ಎಂಎನ್ 2,3,4.ಜೆಪಿಜಿ

2.ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು.

3,4.ಮತಗಟ್ಟೆಗಳತ್ತ ತೆರಳುತ್ತಿರುವ ಮತಗಟ್ಟೆ ಅಧಿಕಾರಿಗಳು

-----------------------