ಬೈಕ್‌ಗೆ ಕಾಡುಹಂದಿ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು

| Published : Apr 19 2024, 01:02 AM IST

ಸಾರಾಂಶ

ನಗರದಿಂದ ಬೆಳಿಬಟ್ಟಲು ಗ್ರಾಮಕ್ಕೆ ತೆರಳುತ್ತಿದ್ದ ರಂಗಸಮುದ್ರ ಗ್ರಾಮ ಪಂಚಾಯಿತಿ ಸದಸ್ಯನ ಬೈಕ್‌ಗೆ ಕಾಡು ಹಂದಿ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ಕೋಟಗುಡ್ಡ ಶೈಲಾಪುರ ಮಾರ್ಗದ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಸಮೀಪ ನಡೆದಿದೆ.

ಪಾವಗಡ: ನಗರದಿಂದ ಬೆಳಿಬಟ್ಟಲು ಗ್ರಾಮಕ್ಕೆ ತೆರಳುತ್ತಿದ್ದ ರಂಗಸಮುದ್ರ ಗ್ರಾಮ ಪಂಚಾಯಿತಿ ಸದಸ್ಯನ ಬೈಕ್‌ಗೆ ಕಾಡು ಹಂದಿ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ಕೋಟಗುಡ್ಡ ಶೈಲಾಪುರ ಮಾರ್ಗದ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಸಮೀಪ ನಡೆದಿದೆ.

ಮೃತ ಕೃಷ್ಣಪ್ಪ (38) ರಂಗಸಮುದ್ರ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದನು. ದ್ವಿಚಕ್ರ ವಾಹನದಲ್ಲಿ ಪತ್ನಿ ಸಮೇತ ಪಾವಗಡ ದಿಂದ ಬೆಳಿಬಟ್ಟಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ದಿಢೀರನೆ ಕಾಡು ಹಂದಿಯ ರಸ್ತೆಗೆ ನುಗ್ಗಿದ್ದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಕೃಷ್ಣಪ್ಪ ಹಾಗೂ ಆತನ ಪತ್ನಿ ಗಾಯಗೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಇಬ್ಬರನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಗ್ರಾಪಂ ಸದಸ್ಯ ಕೃಷ್ಣಪ್ಪ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್.ವಿ.ವೆಂಕಟೇಶ್‌, ತಾಲೂಕು ಕಾಂಗ್ರೆಸ್‌ ಮುಖಂಡ ಚಂದ್ರಶೇಖರ್‌ ರೆಡ್ಡಿ, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಮುಂದಿನ ಜೀವನದ ನಿರ್ವಹಣೆಗೆ ಅರಣ್ಯ ಇಲಾಖೆ 5ಲಕ್ಷ ರು, ಪರಿಹಾರ ನೀಡಬೇಕು. ಘಟನೆಯ ವರದಿ ಪಡೆದು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ಹಮ್ಮಿ ಕೊಳ್ಳುವುದಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಪಾಳೇಗಾರ್ ಲೋಕೇಶ್ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಎಚ್ಚರಿಸಿದ್ದಾರೆ.