ಶಾಲಾವಾರ ಗ್ರಾಮದ ತೋಟವೊಂದರಲ್ಲಿ ಕೆಲಸಕ್ಕೆ ಕೂಲಿ ಕಾರ್ಮಿಕರನ್ನು ಇಳಿಸಿ ಬಳಿಕ ಚಾಲಕ ಆಟೋವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅರಣ್ಯ ಪ್ರದೇಶದಿಂದ ಹೊರಬಂದ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿ ಆಟೋವನ್ನು ರಸ್ತೆ ಬದಿಯ ಹೊಂಡಕ್ಕೆ ತಳ್ಳಿ, ಕಾಲಿನಿಂದ ತುಳಿದು ಸಂಪೂರ್ಣವಾಗಿ ನಾಶಪಡಿಸಿದೆ. ಘಟನೆ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಲೋಕೇಶ್, ಶಿವರಾಜ್, ಗಗನ್, ಸತೀಶ್, ಜಗದೀಶ್, ಪ್ರದೀಪ್, ರವಿ, ಕುಮಾರ್, ಮೋಹನ್ ಹಾಗೂ ವೀರೇಶ್ ಅವರು ತಕ್ಷಣವೇ ಓಡಿ ಸುರಕ್ಷಿತ ಸ್ಥಳಕ್ಕೆ ತೆರಳಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆಟೋ ಸಂಪೂರ್ಣ ಹಾನಿಗೊಳಗಾಗಿದ್ದು, ಮಾಲೀಕನಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.

ಕನ್ನಡಪ್ರಭ ವಾರ್ತೆ ಬೇಲೂರು ತಾಲೂಕಿನ ಸಾಲಾವರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮತ್ತೊಮ್ಮೆ ಆತಂಕ ಮೂಡಿಸಿದ್ದು, ತೋಟದೊಳಗೆ ಕೆಲಸಕ್ಕೆ ಕೂಲಿ ಕಾರ್ಮಿಕರನ್ನು ಬಿಟ್ಟು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಪೆ ಆಟೋ ಮೇಲೆ ಒಂಟಿ ಸಲಗ ದಾಳಿ ಮಾಡಿ ಸಂಪೂರ್ಣವಾಗಿ ಜಖಂಗೊಳಿಸಿದ ಘಟನೆ ನಡೆದಿದೆ.

ಎಂದಿನಂತೆ ಶಾಲಾವಾರ ಗ್ರಾಮದ ತೋಟವೊಂದರಲ್ಲಿ ಕೆಲಸಕ್ಕೆ ಕೂಲಿ ಕಾರ್ಮಿಕರನ್ನು ಇಳಿಸಿ ಬಳಿಕ ಚಾಲಕ ಆಟೋವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅರಣ್ಯ ಪ್ರದೇಶದಿಂದ ಹೊರಬಂದ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿ ಆಟೋವನ್ನು ರಸ್ತೆ ಬದಿಯ ಹೊಂಡಕ್ಕೆ ತಳ್ಳಿ, ಕಾಲಿನಿಂದ ತುಳಿದು ಸಂಪೂರ್ಣವಾಗಿ ನಾಶಪಡಿಸಿದೆ. ಘಟನೆ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಲೋಕೇಶ್, ಶಿವರಾಜ್, ಗಗನ್, ಸತೀಶ್, ಜಗದೀಶ್, ಪ್ರದೀಪ್, ರವಿ, ಕುಮಾರ್, ಮೋಹನ್ ಹಾಗೂ ವೀರೇಶ್ ಅವರು ತಕ್ಷಣವೇ ಓಡಿ ಸುರಕ್ಷಿತ ಸ್ಥಳಕ್ಕೆ ತೆರಳಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆಟೋ ಸಂಪೂರ್ಣ ಹಾನಿಗೊಳಗಾಗಿದ್ದು, ಮಾಲೀಕನಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.

ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದು, ತೋಟಗಳು, ರಸ್ತೆ ಪ್ರದೇಶಗಳು ಹಾಗೂ ಗ್ರಾಮಗಳಿಗೆ ನುಗ್ಗುತ್ತಿರುವ ಘಟನೆಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಡಾನೆಗಳ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಬೇಕು ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.