ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಯಾವುದೇ ಚುನಾವಣೆ ಇರಲಿ, ಟಿಕೆಟ್ ಹಂಚಿಕೆ ಒಂದು ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಟರಾಗಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಪಕ್ಷವು ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.ಹಾಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎನ್ನುವ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ದೇಶದಲ್ಲಿ ಬಿಜೆಪಿ ಈ ಬಾರಿ ಐತಿಹಾಸಿಕ ದಾಖಲೆ ವಿಜಯ ಸಾಧಿಸಲಿದೆ. 370ಕ್ಕೂ ಹೆಚ್ಚು ಬಿಜೆಪಿ ಗೆಲ್ಲಲ್ಲಿದೆ. ನಾವು ಮತ್ತೆ ಅಧಿಕಾರ ಪಡೆದೇ ಪಡೆಯುತ್ತೇವೆ. ಮುಂದೆ ದೇಶದಲ್ಲಿ ಅಭೂತ ಪೂರ್ವ ಬದಲಾವಣೆ ತರುತ್ತೇವೆ. ಸದ್ಯ ಜಾಗತಿಕ ಮಟ್ಟದಲ್ಲಿ ನಮ್ಮ ದೇಶ 5ನೇ ಸ್ಥಾನದಲ್ಲಿ ಇದೆ. ಇದನ್ನು 3ನೇ ಸ್ಥಾನಕ್ಕೆ ತರುವ ಮೂಲಕ ಭಾರತ ಅಭಿವೃದ್ಧಿಶೀಲ ರಾಷ್ಟ್ರ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದೂಸ್ತಾನ್ ಎಂದವರಿಗೆ ಶಿಕ್ಷೆ:
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಷ್ಟೀಕರಣ ರಾಜಕಾರಣ ನಡೆಯುತ್ತಿದೆ. ಇಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರಿಗೆ ರಕ್ಷಣೆ ಇದೆ, ಹಿಂದೂಸ್ತಾನ್ ಜಿಂದಾಬಾದ್ ಅಂದವರಿಗೆ ಶಿಕ್ಷೆ ನೀಡಲಾಗುತ್ತಿದೆ. ಇದು ಸಿದ್ದರಾಮಯ್ಯ ಧೋರಣೆ. ರಾಜ್ಯದ ಜನ ಇದನ್ನು ಗಮನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಳೆದ ಬಾರಿ ನಾವು 26 ಸ್ಥಾನ ಗೆದ್ದಿದ್ದೆವು. ಈ ಬಾರಿ 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ ಎಂದರು.- - - -ಫೋಟೋ: ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ