ಸಾರಾಂಶ
ಚನ್ನಪಟ್ಟಣ: ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ವಿವಾಹಿತ ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ವಿಷಕಂಠ ಪತ್ನಿ ಅಶ್ವಿನಿ(28) ಮೃತರು. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದವರಾದ ಅಶ್ವಿನಿ, ಕಳೆದ ನಾಲ್ಕೈದು ವರ್ಷಗಳ ಹಿಂದೆ ತಾಲೂಕಿನ ಭೈರನಾಯಕಹಳ್ಳಿ ಗ್ರಾಮದ ವಿಷಕಂಠ ಅವರ ಜತೆ ಮದುವೆಯಾಗಿತ್ತು. ಈ ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ. ಮದುವೆಯಾದ ದಿನದಿಂದಲೂ ಪತಿ ಹಾಗೂ ಆತನ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪತಿ ಮನೆಯವರು ಹೊಡೆದು ಈಕೆಯನ್ನು ಸಾಯಿಸಿ ನೇಣು ಹಾಕಿದ್ದಾರೆಂದು ಮೃತಳ ಸಂಬಂಧಿಕರು ದೂರಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತಳ ಶವವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತ ಅಶ್ವಿನಿ ಅವರ ತಾಯಿ ರಾಜಮ್ಮರವರು ವಿಷಕಂಠ ಸೇರಿದಂತೆ ಅವರ ಮನೆಯವರ ವಿರುದ್ದ ಎಂ.ಕೆ. ದೊಡ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
;Resize=(128,128))
;Resize=(128,128))
;Resize=(128,128))