ಸಾರಾಂಶ
ಚನ್ನಪಟ್ಟಣ: ತಾಂತ್ರಿಕ, ಸಂಶೋಧನಾ ಹಾಗೂ ಉತ್ಪಾದನಾ ಕ್ಷೇತ್ರಗಳಲ್ಲಿ ಮಹಿಳೆಯರು ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ತಮ್ಮ ಬುದ್ಧಿಶಕ್ತಿಯಿಂದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರಗಳನ್ನು ತಂದು ಕೊಟ್ಟಿದ್ದು, ಎಲ್ಲ ಕ್ಷೇತ್ರಗಳಲ್ಲಿಯೋ ಇಂದು ಸಾಧನೆ ಮಾಡಿದ್ದಾರೆ ಎಂದು ಕೋಡಂಬಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಜಿ. ಭಾಗ್ಯಲಕ್ಷ್ಮಮ್ಮ ತಿಳಿಸಿದರು.
ತಾಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಮಹಿಳಾ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ ಎಂದರು.
ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸಬೇಕಿದೆ ಎಂದರು.ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ರಾಜಣ್ಣ ಕೆ.ಬಿ., ಮತ್ತಿರವಿ, ಪ್ರವೀಣ್ ಕುಮಾರ್ ಕೆ.ಪಿ, ರಂಗನಾಥ್, ಬೆಸ್ಕಾಂ ಇಂಜಿನಿಯರ್ ಹಾಗೂ ನೋಡಲ್ ಅಧಿಕಾರಿ ಮಹೇಂದ್ರ ಮುಂತಾದವರು ಹಾಜರಿದ್ದರು. ಗ್ರಂಥಾಪಲಕ ಎಚ್.ಎನ್. ಶ್ರೀನಿವಾಸ್ ಸ್ವಾಗತಿಸಿ, ನಿರೂಪಿಸಿದರು.
ಪೊಟೋ೩೦ಸಿಪಿಟಿ೨:ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಮಹಿಳಾ ಗ್ರಾಮಸಭೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಿ. ಭಾಗ್ಯಲಕ್ಷ್ಮಮ್ಮ ಮಾತನಾಡಿದರು.