ಚಾರಣಕ್ಕೆ ಬಂದ ಮಹಿಳೆಯೊಬ್ಬಳು ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ತಡಿಯಂಡ ಬೆಟ್ಟದಲ್ಲಿ ಗುರುವಾರ ಸಂಜೆ ನಡೆದಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು(ಕೊಡಗು)
ಚಾರಣಕ್ಕೆ ಬಂದ ಮಹಿಳೆಯೊಬ್ಬಳು ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ತಡಿಯಂಡ ಬೆಟ್ಟದಲ್ಲಿ ಗುರುವಾರ ಸಂಜೆ ನಡೆದಿದೆ.ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿ ಬೆಟ್ಟಕ್ಕೆ ತೆರಳಿದ ಸುಮಾರು 36 ವರ್ಷದ ಶರಣ್ಯ ನಾಪತ್ತೆಯಾದ ಮಹಿಳೆ.
ತಡಿಯಂಡಮೋಳ್ ಬೆಟ್ಟ ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟವಾಗಿದೆ. ಆನ್ಲೈನಲ್ಲಿ ಬುಕ್ಕಿಂಗ್ ಮಾಡಿ ಬಂದ ಈ ಮಹಿಳೆ ಒಬ್ಬಳೇ ಇರುವುದರಿಂದ ಈ ವ್ಯಾಪ್ತಿಯಲ್ಲಿ ಕಾಡಾನೆ ಇರುವುವಿಕೆ ಇದ್ದಾಗ ಬೇರೆ ಪ್ರವಾಸಿಗರ ಜೊತೆಯಲ್ಲಿ ಚಾರಣಕ್ಕೆ ಕಳುಹಿಸಲಾಗಿದೆ.ಬೆಟ್ಟಕ್ಕೆ ತೆರಳಿದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಆತಂಕಗೊಂಡು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬವರು ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಹಾಗೂ ಪೊಲೀಸರು ಗ್ರಾಮಸ್ಥರು ಬೆಟ್ಟದಲ್ಲಿ ಹುಡುಕಾಡಿದರೂ ಮಹಿಳೆಯ ಸುಳಿವು ತೊರೆತಿಲ್ಲ.ಶುಕ್ರವಾರವೂ ಕೂಡ ನಾಲ್ಕು ತಂಡ ಮಾಡಿ ಶ್ವಾನದಳದೊಂದಿಗೆ ಕಾರ್ಯಾಚರಣೆ ನಡೆಸಿದರೂ ಶರಣ್ಯ ಪತ್ತೆಯಾಗಿಲ್ಲ.