ಸಾರಾಂಶ
ಪೋಷಣ ಅಭಿಯಾನದಲ್ಲಿ ಪೌಷ್ಟಿಕ ಆಹಾರದ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಹೂವಿನಹಡಗಲಿ: ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ ಬಳ್ಳಾರಿ, ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಇಲ್ಲಿನ ಪಂಚಮಸಾಲಿ ಸಮುದಾಯ ಭವನದಲ್ಲಿ, ಕೇಂದ್ರ ಸರ್ಕಾರದ ಮುದ್ರಾ ಸ್ವನಿಧಿ, ಪಿಎಂ ಜೀವನ ಸುರಕ್ಷಾ ಭಿಮಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿ ಕುರಿತ ಕಾರ್ಯಾಗಾರವನ್ನು ಅಂಗನವಾಡಿಯ ಕಾರ್ಯಕರ್ತೆಯರಿಗೆ, ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು. ನಂತರ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳು, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು.ಪೋಷಣ ಅಭಿಯಾನದಲ್ಲಿ ಪೌಷ್ಟಿಕ ಆಹಾರದ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮನಗೌಡ, ಎಸ್ ಬಿ ಐ ಶಾಖೆಯ ವ್ಯವಸ್ಥಾಪಕ ಯಶವಂತ ನಾಯಕ, ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ. ಎಚ್, ಆರೋಗ್ಯ ಮಿತ್ರ ಕಾರ್ಯಕ್ರಮ ಅಧಿಕಾರಿ ನಬಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ ಹಾಗೂ ಬಳ್ಳಾರಿ ಕಾರ್ಯಾಲಯಗಳಿಂದ, ಪಟ್ಟಣದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನದ ಅಡಿಯಲ್ಲಿ, ಶ್ರಮದಾನ ಕೈಗೊಳ್ಳಲಾಗಿತ್ತು.
ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ.ಎಚ್. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಕಾಲೇಜು ಆವರಣದ ತೋಟದಲ್ಲಿ ಕಳೆ ಕೀಳುವ ಮೂಲಕ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು.ಕಾಲೇಜು ಪ್ರಾಚಾರ್ಯ ಡಾ.ರಮೇಶ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))