ಆರ್ಥಿಕ ಸಾಕ್ಷರತೆಯ ಬಗ್ಗೆ ಶಾಲಾ ಮಕ್ಕಳಿಗೆ ಕಾರ್ಯಗಾರ

| Published : Dec 21 2024, 01:18 AM IST

ಸಾರಾಂಶ

ಸಣ್ಣ ಸಣ್ಣ ಹೂಡಿಕೆಯೊಂದಿಗೆ ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂಬ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹೂಡಿಕೆ ಎಂದರೆ ಒಂದು ಸಸಿಯನ್ನು ನೆಟ್ಟಂತೆ ಎಂದು ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು.

ಕನ್ನಡಪ್ರಭ ವಾರ್ತೆ ಮೈಸೂರುವಿಜಯವಿಠಲ ವಿದ್ಯಾಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಆರ್ಥಿಕ ಸಾಕ್ಷರತೆಯ ಬಗ್ಗೆ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಜಿಎಂ ವಿದ್ಯಾ ಸಂಪತ್ ಹಾಗೂ ಎಸ್ಬಿಐ ಪ್ರದೇಶ-1ರ ಪ್ರಾದೇಶಿಕ ವ್ಯವಸ್ಥಾಪಕ ರಂಗನಾಥ್ ಭಾಗವಹಿಸಿದ್ದರು.

ಸಣ್ಣ ಸಣ್ಣ ಹೂಡಿಕೆಯೊಂದಿಗೆ ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂಬ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹೂಡಿಕೆ ಎಂದರೆ ಒಂದು ಸಸಿಯನ್ನು ನೆಟ್ಟಂತೆ ಎಂದು ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು. ಪ್ರಧಾನಮಂತ್ರಿ ಸುರಕ್ಷತಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜನ್ ಧನ್ ಯೋಜನೆ ಖಾತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಆಯವ್ಯಯ ಬ್ಯಾಂಕಿಂಗ್ ಪರಿಚಯ, ಷೇರುಗಳು ಮತ್ತು ಪರಸ್ಪರ ನಿಧಿಗಳು, ಶಿಕ್ಷಣ ಸಾಲ, ಹಣಕಾಸು ವಲಯದ ನಿಯಂತ್ರಕರು ಮುಂತಾದ ವಿಷಯಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಯಿತು. ಈ ಎಲ್ಲ ಯೋಜನೆಗಳಿಂದ ಇಂದು ಎಷ್ಟು ಕುಟುಂಬಗಳು ಉಪಯೋಗವನ್ನು ಪಡೆದುಕೊಳ್ಳುತ್ತಿವೆ ಎಂಬ ಮಾಹಿತಿಯನ್ನು ಮಕ್ಕಳಿಗೆ ನೀಡಲಾಯಿತು.

ವಿಜಯವಿಠಲ ವಿದ್ಯಾಶಾಲೆಯ ಪ್ರಾಂಶುಪಾಲೆ ಎಸ್.ಎ. ವೀಣಾ, ವಿವಿಧ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.