ಸಾರಾಂಶ
ಕನಕಪುರ: ಅರ್ಕಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ನಿಂಗನಾಪುರದೊಡ್ಡಿ ನಿವಾಸಿ ಮುತ್ತು(28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಕನಕಪುರ: ಅರ್ಕಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ನಿಂಗನಾಪುರದೊಡ್ಡಿ ನಿವಾಸಿ ಮುತ್ತು(28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಅರಳಾಳು ಗ್ರಾಮದ ಮರ ಕುಯ್ಯುವ ಮಿಲ್ ನಲ್ಲಿ ಮರಗೆಲಸ ಮಾಡಿಕೊಂಡು ಕುಟುಂಬದೊಂದಿಗೆ ನೆಲೆಸಿದ್ದ ಈತ, ಶುಕ್ರವಾರ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದು ಮನೆಗೆ ಬಂದಿದ್ದಾನೆ. ನಂತರ ತನ್ನ ಭಾವಮೈದುನನ ಜೊತೆ ಬೊಲೆರೋ ವಾಹನದಲ್ಲಿ ಅರ್ಕಾವತಿ ಸೇತುವೆ ಮೇಲೆ ವಾಹನ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡಿ ಕೊಂಡು ಬಂದು "ಸಾರಿ ಭಾವಮೈದ " ಎಂದು ನದಿಗೆ ಹಾರಿದ್ದಾನೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣ ಹಾಗೂ ಸಬ್ ಇನ್ಸ್‌ಪೆಕ್ಟರ್ ಮನೋಹರ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತನಿಗೆ ಪತ್ನಿ ಹಾಗೂ ಒಂದೂವರೆ ವರ್ಷದ ಮಗು ಇದ್ದಾರೆ.