ಮರಳು ತುಂಬಿದ ಟ್ರ್ಯಾಕ್ಟರ್‌ ಹರಿದು ಯುವಕ ಸಾವು

| Published : Dec 26 2023, 01:30 AM IST / Updated: Dec 26 2023, 01:31 AM IST

ಮರಳು ತುಂಬಿದ ಟ್ರ್ಯಾಕ್ಟರ್‌ ಹರಿದು ಯುವಕ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಮರಳು ತುಂಬಿದ ಟ್ರ್ಯಾಕ್ಟರ್‌ ಹರಿದು ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭವಾರ್ತೆ ಪಾವಗಡ

ದ್ವಿಚಕ್ರ ವಾಹನ ಹಾಗೂ ಮರಳು ತುಂಬಿದ್ದ ಟ್ರ್ಯಾಕ್ಟರ್‌ ನಡುವೆ ಸಂಭವಿಸಿ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ರುದ್ರೇಶ್‌ (26) ಮೃತಪಟ್ಟ ಯುವಕ. ವೈ.ಎನ್‌.ಹೊಸಕೋಟೆ ಗ್ರಾಮದ ತಮ್ಮ ಜಮೀನಿನ ಕಣದಿಂದ ಗರಡುಗಂಭ ರಸ್ತೆ ಮೂಲಕ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್‌ ನಡುವೆ ಅಪಘಾತ ಉಂಟಾಗಿದೆ. ಟ್ರ್ಯಾಕ್ಟರ್‌ ಹರಿದ ಪರಿಣಾಮ ರುದ್ರೇಶ್‌ ಗಂಭೀರವಾಗಿ ಗಾಯಗೊಂಡಿದ್ದರು. ವೈ.ಎನ್‌.ಹೊಸಕೋಟೆ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಪಾವಗಡದ ಸರ್ಕಾರಿ ಆಸ್ಪತ್ರೆಗೆ ಹೋಗುವ ವೇಳೆ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕಿನ ನೌಕರ ಆನಂದಕುಮಾರ್ ಟ್ರ್ಯಾಕ್ಟರ್‌ ಚಲಾಯಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಈ ಸಂಬಂಧ ಸ್ಥಳಕ್ಕೆ ದಾವಿಸಿದ ವೈ.ಎನ್‌.ಹೊಸಕೋಟೆ ಪಿಎಸ್‌ಐ ರಾಮಚಂದ್ರಪ್ಪ ಘಟನೆ ಕುರಿತು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಟ್ರ್ಯಾಕ್ಟರ್‌ ಡೈವರ್ ಮತ್ತು ಮಾಲಿಕರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗೆ ಆಧಾರವಾಗಿದ್ದ ರುದ್ರೇಶ್ ಸಾವಿನಿಂದ ಆತನ ಕುಟುಂಬ ಅನಾಥವಾಗಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮೃತ ರುದ್ರೇಶ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.