ನರಸಿಂಹರಾಜಪುರತಾಲೂಕಿನ ಆಡುವಳ್ಳಿ ಗ್ರಾಮದಲ್ಲಿ 30 ವರ್ಷದ ಯುವಕನಿಗೆ ಮಂಗನ ಕಾಯಿಲೆ ಇರುವುದು ದೃಡಪಟ್ಟಿದ್ದು ತಾಲೂಕಿನಲ್ಲಿ ಈ ವರ್ಷದ ಪ್ರಥಮ ಮಂಗನ ಕಾಯಿಲೆ ಪ್ರಕರಣ ದಾಖಲಾಗಿದೆ.

- ಈ ವರ್ಷ ಎನ್‌.ಆರ್.ಪುರ ತಾಲೂಕಿನಲ್ಲಿ ಪ್ರಥಮ ಮಂಗನ ಕಾಯಿಲೆ ಪ್ರಕರಣ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ತಾಲೂಕಿನ ಆಡುವಳ್ಳಿ ಗ್ರಾಮದಲ್ಲಿ 30 ವರ್ಷದ ಯುವಕನಿಗೆ ಮಂಗನ ಕಾಯಿಲೆ ಇರುವುದು ದೃಡಪಟ್ಟಿದ್ದು ತಾಲೂಕಿನಲ್ಲಿ ಈ ವರ್ಷದ ಪ್ರಥಮ ಮಂಗನ ಕಾಯಿಲೆ ಪ್ರಕರಣ ದಾಖಲಾಗಿದೆ.

ಡಿ. 25 ರಂದು ಯುವಕನಿಗೆ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹೆಚ್ಚಿನ ಚಿಕಿತ್ಸೆಗೆ ಡಿ.30 ರಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಜ.1 ರಂದು ಮಂಗನ ಕಾಯಿಲೆ ಇರುವುದು ಪರೀಕ್ಷೆಯಿಂದ ದೃಡಪಟ್ಟಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಗೆ ಉಚಿತ ಚಿಕಿತ್ಸೆ ಇರುವುದರಿಂದ ಜ. 2 ರಂದು ಮಣಿಪಾಲ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಯುವಕನಿಗೆ ಈಗ ಸಂಪೂರ್ಣ ಗುಣವಾಗಿದ್ದು ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗಿದ್ದಾನೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ.

--ಬಾಕ್ಸ್--

ಮಂಗನ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಡುವಳ್ಳಿ ಗ್ರಾಮದ ಎಲ್ಲಾ ಮನೆಗಳಿಗೂ ಉಣ್ಣೆ ನಿವಾರಕ ಡೆಫಾ ತೈಲ ನೀಡಲಾಗಿದೆ ಎಂದು ಕಟ್ಟಿನಮನೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದ್ದಾರೆ.

ಹತ್ತಿರದ ಶಾಲೆಗಳಿಗೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿ ತೆರಳಿ ಮಂಗನ ಕಾಯಿಲೆ ಬಗ್ಗೆ ಅರಿವು ಮೂಡಿಸ ಲಾಗಿದೆ. ಜ.2 ರಂದು ಗಡಿಗೇಶ್ವರ ಪ್ರೌಢ ಶಾಲೆ ಹಾಗೂ ಆಡುವಳ್ಳಿ ಗ್ರಾಪಂನಲ್ಲಿ ಪೂರ್ವ ಭಾವಿ ಸಭೆ ನಡೆಸಲಾಗಿದೆ. ಶೀಘ್ರ ದಲ್ಲೇ ಆಡುವಳ್ಳಿ ಗ್ರಾಪಂನಲ್ಲಿ ಸಭೆ ಕರೆದು ಟಾಸ್ಕ್ ಪೋಸ್ರ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಸಲಾಗುವುದು. ಆಡುವಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಯಾರಿಗಾದರೂ ಜ್ವರ ಕಾಣಿಸಿಕೊಂಡರೆ ತಕ್ಷಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ನರಸಿಂಹರಾಜಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 10 ಹಾಸಿಗೆ ಕೆ.ಎಫ್.ಡಿ.ವಾರ್ಡ್ ತೆರೆಯಲಾಗಿದೆ ಎಂದು ವಿವರಿಸಿದ್ದಾರೆ.