ಸಾರಾಂಶ
ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ವಿಜಯದಶಮಿ ಹಬ್ಬದಂದೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.ಹೊರವಲಯದ ಶಿವಳ್ಳಿ ರಸ್ತೆಯ ರೈಲ್ವೆ ಬ್ರಿಡ್ಜ್ ಹತ್ತಿರ 30 ವರ್ಷ ವಯಸ್ಸಿನ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಹುಬ್ಬಳ್ಳಿಯ ಜನರನ್ನು ಬೆಚ್ಚಿ ಬಿಳಿಸಿದೆ.
ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ.ಸುದ್ದಿ ತಿಳಿದು ಸ್ಥಳಕ್ಕೆ ಎಸಿಪಿ ಬಲಪ್ಪ ನಂದಗಾವಿ, ಅಶೋಕನಗರ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ಬಿ.ಕೆ. ಪಾಟೀಲ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.