ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮ. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು
ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರಪ್ರೀತಿಗೆ ಕಣ್ಣಿಲ್ಲ ಅದು ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿಯ ಶಶಿಕಲಾ (29) ಮತ್ತು ಹೊಸಕೋಟೆ ತಾಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗಿದ್ದಾರೆ. ಅಷ್ಟೇ ಅಲ್ಲದೆ ತಮಗೆ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.ಏನಿದು ಘಟನೆ?ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮ. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನೊಂದಿಗೆ ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ ಗ್ರಾಮದ ದೇವಾಲಯದಲ್ಲಿ ಮದುವೆಯಾಗಿದ್ದಾಳೆ.
ವಿಷಯ ತಿಳಿದ ಶಶಿಕಲಾ ಪೋಷಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರದಕಲ್ಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.ಮದುವೆಯಾದ ಬಳಿಕ ಈ ಜೋಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.ಬಾಕ್ಸ್...ನಮ್ಮ ಪಾಡಿಗೆ ನಮ್ಮನ್ನು ಬಿಡಿ
‘ನಾವು ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ’ ಎಂದು ಶಶಿಕಲಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಇತ್ತ ಪೋಷಕರು ‘ವರಸೆಯಲ್ಲಿ ತಮ್ಮನಾಗುವವನನ್ನೇ ಮದುವೆಯಾಗಿ ಇಡೀ ಕುಟುಂಬಕ್ಕೆ ಅವಮಾನ ತಂದಿದ್ದೀಯಾ’ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಿತ್ರ ಮದುವೆ ಪ್ರಕರಣ ಸ್ಥಳೀಯವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ.---------
ಸಿಕೆಬಿ-2 ಮತ್ತು 3 ಶಶಿಕಲಾ ಮತ್ತು ಪ್ರವೀಣ್