ಅಲೆಮಾರಿ ಜನಾಂಗದವರಿಗೆ ಆಧಾರ್ ಆಂದೋಲನ: ಡೀಸಿ ಶುಭ ಕಲ್ಯಾಣ್

| Published : Jul 15 2025, 11:45 PM IST

ಸಾರಾಂಶ

ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಕೆಲವರು ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳಿಲ್ಲದಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿರುವುದರಿಂದ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರನ್ನು ಗುರುತಿಸಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಒದಗಿಸಲು ಕ್ರಮವಹಿಸಲಾಗುವುದು.

ತುಮಕೂರು: ಜಿಲ್ಲೆಯಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರಿಗೆ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ತಲುಪಿಸುವ ಸಲುವಾಗಿ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಕೆಲವರು ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳಿಲ್ಲದಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿರುವುದರಿಂದ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರನ್ನು ಗುರುತಿಸಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಒದಗಿಸಲು ಕ್ರಮವಹಿಸಲಾಗುವುದು. ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಜಿಲ್ಲೆಯ ಅಲೆಮಾರಿ ಜನಾಂಗದವರು ಸಂಬಂಧಪಟ್ಟ ತಾಲೂಕು ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 7304975519 ನ್ನು ಸಂಪರ್ಕಿಸಿ ತಮ್ಮ ಮಾಹಿತಿಯನ್ನು ನೀಡಬೇಕು. ಅಲ್ಲದೆ, ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಜಿಲ್ಲೆಯ ಅಲೆಮಾರಿ ಜನಾಂಗದವರ ಬಗ್ಗೆ ಮಾಹಿತಿ ಹೊಂದಿರುವ ಸಾರ್ವಜನಿಕರು/ ಸ್ವಯಂ ಸೇವಾ ಸಂಘಗಳು/ ಸ್ವಯಂ ಸೇವಕರು ಮೇಲ್ಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.