ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಎಎಪಿ ಒತ್ತಾಯ

| Published : Dec 20 2024, 12:46 AM IST

ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಎಎಪಿ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆಮ್‌ ಆದ್ಮಿ ಮುಖಂಡರು ಗುರುವಾರ ಜಿಲ್ಲಾಡಳಿತ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆಮ್‌ ಆದ್ಮಿ ಮುಖಂಡರು ಗುರುವಾರ ಜಿಲ್ಲಾಡಳಿತ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಎಎಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್, ಇತ್ತೀಚೆಗೆ ಸಂಸತ್ ಅಧಿವೇಶನದಲ್ಲಿ ಗೃಹಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ದೇಶದ ಜನತೆಯಲ್ಲಿ ಕೋಮು ಸೌಹಾರ್ಧತೆ ಕದಡಿದ್ದಾರೆ ಎಂದು ಆರೋಪಿಸಿದರು.ಭಾರತ ದೇಶದಲ್ಲಿ ಸಾವಿರಾರು ಜಾತಿ, ಮತಗಳಿವೆ. ಅಂಬೇಡ್ಕರ್ ಭಾರತ ದೇಶದಲ್ಲಿ ಏಕ ಸಂವಿಧಾನ ರಚಿಸಿ ಸರ್ವರಿಗೂ ಸಮಾನ ಹಕ್ಕು ನೀಡಿದ್ದು ಆ ಸಂವಿಧಾನವನ್ನು ಬದಲಿಸುವ ಹಕ್ಕು ಯಾರಿಗೂ ಇಲ್ಲ ಎಂದರು. ಭಾರತದ ಗೃಹ ಸಚಿವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಂವಿಧಾನ ಹಾಗೂ ಅಂಬೇಡ್ಕರ್‌ಗೆ ಅವಮಾನಿಸಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಗೃಹಮಂತ್ರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸಚಿವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದರು.ಈ ಸಂದರ್ಭದಲ್ಲಿ ಎಎಪಿ ಮುಖಂಡರಾದ ರಂಗನಾಥ್, ಅಂತೋಣಿ, ಜಿ.ಪ್ರಭು ಇದ್ದರು. 19 ಕೆಸಿಕೆಎಂ 2

ಕೇಂದ್ರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಆಮ್‌ ಆದ್ಮಿ ಮುಖಂಡರು ಗುರುವಾರ ಜಿಲ್ಲಾಡಳಿತ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

-- ಬಾಕ್ಸ್--ಅಮಿತ್‌ ಶಾ ಅನರ್ಹಗೊಳಿಸಲು ಆಗ್ರಹಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿ ಬಿಟ್ಟಿದೆ ಎಂದು ಹೇಳಿಕೆ ನೀಡಿರುವ ಕೇಂದ್ರದ ಗೃಹ ಸಚಿವರನ್ನು ಅವರ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ದಸಂಸ (ಚಂದ್ರಕಾಂತ್ ಬಣ) ಜಿಲ್ಲಾಧ್ಯಕ್ಷ ಸುಂದ್ರೇಶ್‌ ಹೊಯ್ಸಳಲು ಆಗ್ರಹಿಸಿದ್ದಾರೆ.

ಅಂಬೇಡ್ಕರ್ ಹೆಸರು ಪದೇ ಪದೇ ಬಳಸುವ ಬದಲು ದೇವರ ಹೆಸರನ್ನು ಬಳಸಿದ್ದರೆ ಇಷ್ಟೊತ್ತಿಗೆ ಏಳು ಜನ್ಮದ ಪುಣ್ಯ ಬರುತ್ತಿತ್ತು ಎಂದು ರಾಜ್ಯ ಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ದೇಶದ ಜನತೆಯಲ್ಲಿ ಕೋಮು ಭಾವನೆ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಕಾಲಘಟ್ಟದಲ್ಲಿ ದಲಿತ ಸಮುದಾಯದ ಪರಿಸ್ಥಿತಿ ಹಿಂತಿರುಗಿ ನೋಡಿದರೆ ದೌರ್ಜನ್ಯ, ಅಸ್ಪೃಶ್ಯತೆಯನ್ನು ಒಂದೊಮ್ಮೆ ದೇವರು ಸನಿಹಕೆ ಬಾರದಿದ್ದಾಗ ಶೋಷಿತರ ನಾಯಕರಾಗಿ ಅಂಬೇಡ್ಕರ್ ಬಂದರು. ದೇಶದಲ್ಲಿನ ಮಹಿಳೆಯರು, ಶೋಷಿತರ ಬದುಕನ್ನು ಅಧ್ಯಯನ ಮಾಡಿ, ದೂರದೃಷ್ಟಿಯಿಂದ ಸಂವಿಧಾನ ರಚಿಸಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸುವ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.