ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ

| Published : Apr 08 2024, 01:05 AM IST

ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಅಬಕಾರಿ ನೀತಿಗಳ ಉಲ್ಲಂಘನೆ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವ ಬಿಜೆಪಿ ನೇತೃ ತ್ವದ ಕೇಂದ್ರ ಸರ್ಕಾರದ ಧಮನಕಾರಿ ನೀತಿಯನ್ನು ವಿರೋಧಿಸಿ ಭಾನವಾರ ಅಮ್ ಆದ್ಮಿ ಪಾರ್ಟಿ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುಅಬಕಾರಿ ನೀತಿಗಳ ಉಲ್ಲಂಘನೆ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವ ಬಿಜೆಪಿ ನೇತೃ ತ್ವದ ಕೇಂದ್ರ ಸರ್ಕಾರದ ಧಮನಕಾರಿ ನೀತಿಯನ್ನು ವಿರೋಧಿಸಿ ಭಾನವಾರ ಅಮ್ ಆದ್ಮಿ ಪಾರ್ಟಿ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.ಈ ವೇಳೆ ಮಾತನಾಡಿದ ಅಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಡಾ.ವಿಶ್ವನಾಥ್, ಅಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ವಿರೋಧ ಪಕ್ಷಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರದ ನರೇಂದ್ರಮೋದಿ ಸರಕಾರ ಮಾಡಿದೆ. ಫೇಕ್ ಸ್ಕ್ಯಾಮ್ ಹೆಸರಿನಲ್ಲಿ ನಮ್ಮ ಮುಖ್ಯಮಂತ್ರಿಗಳನ್ನು ಬಂಧಿಸಿ, ಅವರಿಗೆ ಬೇಲ್ ಸಿಗದಂತೆ ಮಾಡಿರುವ ಕೇಂದ್ರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.ಎಎಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾತನಾಡಿ, ಬಿಜೆಪಿ ಅಭಿವೃದ್ಧಿ ವಿಚಾರವನ್ನು ಬಿಟ್ಟು ಜನರನ್ನು ಮೌಢ್ಯದ ಕಡೆಗೆ ತೆಗೆದುಕೊಂಡು ಹೋಗುತ್ತಿದೆ. ಭ್ರಷ್ಟಾಚಾರಿ ಗಳಿಗೆ ಕ್ಲೀನ್‌ಚಿಟ್ ನೀಡುವ ಪಕ್ಷ ಎಂದರೆ ಅದು ಬಿಜೆಪಿ. ಹಣಕಾಸಿನ ಕಳಂಕ ಹೊತ್ತ ಸುಮಾರು 25 ಕ್ಕೂ ಹೆಚ್ಚು ಜನರು ಬಿಜೆಪಿಗೆ ಸೇರಿದ ನಂತರ ಅವರ ಮೇಲಿದ್ದ ಇಡಿ, ಸಿಪಿಐ, ಐಟಿ ಕೇಸುಗಳನ್ನು ಖುಲಾಸೆ ಮಾಡಲಾಗಿದೆ. ರಾಮಮಂದಿರ, ಹಿಂದು-ಮುಸ್ಲಿಂ ಹೆಸರಿನಲ್ಲಿ ಜನರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ದೆಹಲಿ ಸರ್ಕಾರದ ಸಿ.ಎಂ.ವಿರುದ್ಧ ದಾಖಲೆ ಇಲ್ಲದ ಸುಳ್ಳು ಅವ್ಯವಹಾರ ಕೇಸಿನಲ್ಲಿ ಬಂಧಿಸಿರುವುದು ಖಂಡನೀಯ. ಈ ಕೂಡಲೆ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.ಎಎಪಿ ಜಿಲ್ಲಾಧ್ಯಕ್ಷ ಜಯರಾಮಯ್ಯ ಮಾತನಾಡಿ, ಇಂದು ಇಡೀ ದೇಶದಾದ್ಯಂತ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಕೇಜ್ರಿವಾಲ್ ಅವರ ಬಂಧನ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ದೇಶದಲ್ಲಿ ಆರಾಜಕತೆ ಸೃಷ್ಟಿ ಯಾಗಿದೆ.ಆರ್.ಎಸ್.ಎಸ್. ಅಜೆಂಡ್‌ದಂತೆ ಆಡಳಿತ ನಡೆಸುತ್ತಿರುವ ಬಿಜೆಪಿ, ಆರ್.ಎಸ್.ಎಸ್. ಚಿಂತನೆ ದೇಶವನ್ನು ವಿಭಜಿಸುವುದಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದ್ದ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಶಕ್ತಿ ಮೀರಿ ಪ್ರಯತ್ನಿಸುತಿದ್ದು, ಇದರ ಫಲವಾಗಿ ಸಾಕ್ಷಾಧಾರಗಳಿಲ್ಲದಿದ್ದರೂ ಬಂಧಿಸಿ, ತೊಂದರೆ ಕೊಡುತ್ತಿದೆ. ಇದರ ವಿರುದ್ದ ನಾವೆಲ್ಲರೂ ಒಗ್ಗೂಡಬೇಕಿದೆ ಎಂದರು.ಉಪವಾಸ ಸತ್ಯಾಗ್ರಹದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಪ್ರೇಮಕುಮಾರ್,ಮಹಿಳಾ ಅಧ್ಯಕ್ಷೆ ರುಕ್ಸಾನಾ ಭಾನು, ನಗರ ಅಧ್ಯಕ್ಷ ಗೌಸ್ ಫೀರ್, ಗ್ರಾಮಾಂತರ ಅಧ್ಯಕ್ಷ ದಿನೇಶಕುಮಾರ್, ಮಧುಗಿರಿ ಅಧ್ಯಕ್ಷ ಮುಜಾಮಿಲ್ ಪಾಷ, ಶಿರಾ ಪ್ರಶಾಂತ ಮತ್ತಿತರರು ಭಾಗವಹಿಸಿದ್ದರು.