ಹುಬ್ಬಳ್ಳಿ:
ಡಿ.ಕೆ. ಶಿವಕುಮಾರ ನೇತೃತ್ವದ ಸಂಪುಟದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ವಿಪ ಮುಖ್ಯ ಸಚೇತಕ ಸಲೀಅಹ್ಮದ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಕರ್ನಾಟಕ ಟಿಪ್ಪು ಸುಲ್ತಾನ್ ಅಲ್ಪಸಂಖ್ಯಾತರ ಸಂಘಟನೆಯಿಂದ ಶಹರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಶಾಸಕ ಪ್ರಸಾದ ಅಬ್ಬಯ್ಯ ಸತತವಾಗಿ ಮೂರು ಬಾರಿ ಶಾಸಕರಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಶಹರದಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ವಿಪ ಮುಖ್ಯ ಸಚೇತಕ ಸಲೀಂಅಹ್ಮದ್ ಸಹ ಪಕ್ಷದ ಏಳ್ಗೆಗಾಗಿ ಶ್ರಮಿಸಿದವರು. ಕಳೆದ ಬಾರಿ ಚುನಾವಣೆಯಲ್ಲಿ ಸಮುದಾಯದ ಜನರು ಕಾಂಗ್ರೆಸ್ ಪಕ್ಷದೊಂದಿಗೆ ನಿಲ್ಲುವಂತೆ ಮಾಡಿದವರು. ಜತೆಗೆ ಪಕ್ಷಕ್ಕಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಇಂತಹವರಿಗೆ ಸಚಿವ ಸ್ಥಾನ ನೀಡಿದಲ್ಲಿ ಈ ಭಾಗದಲ್ಲಿ ಪಕ್ಷದ ಘನತೆ ಹೆಚ್ಚಲಿದೆ. ಜತೆಗೆ ಮುಂಬರುವ ಚುನಾವಣೆಯಲ್ಲೂ ಹೆಚ್ಚಿನ ಅನಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ವೇಳೆ ಸಂಘಟನೆ ಅಧ್ಯಕ್ಷ ಮೌಲಾಲಿ ಮುಲ್ಲಾ, ಖಜಾಂಚಿ ಉಮರ್ ಫಾರೂಕ್ ಮುಲ್ಲಾ, ಸದಸ್ಯರಾದ ಗೌಸ್ ಕಲಾದಗಿ, ಮೈನುದ್ದಿನ್ ಶೇಕ್, ಇಸ್ಮಾಯಿಲ್ ಸೌದಾಗರ, ಸೊಹೀಲ್ ಶೇಕ್, ನಭಿ ರಾಯಚೂರ ಸೇರಿದಂತೆ ಹಲವರಿದ್ದರು.