ಅಬ್ಬಿಕಟ್ಟೆ ಸೇತುವೆ ಮುಳುಗಡೆ

| Published : Jul 27 2024, 12:54 AM IST

ಸಾರಾಂಶ

ಬೇಲೂರು ತಾಲೂಕಲ್ಲಿ ಎಡೆಬಿಡದೆ ಸರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಭರ್ತಿಯಾಗಿ ಕೆಲವು ಗ್ರಾಮಗಳಲ್ಲಿ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಮಧ್ಯೆ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಬ್ಬಿಕಟ್ಟೆ ಸಂಪೂರ್ಣ ತುಂಬಿ ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಮಮತಾ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಬ್ಬಿಕಟ್ಟೆ ಸಂಪೂರ್ಣ ತುಂಬಿ ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಮಮತಾ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಡೆಬಿಡದೆ ಸರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಭರ್ತಿಯಾಗಿ ಕೆಲವು ಗ್ರಾಮಗಳಲ್ಲಿ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾದ ಪ್ರದೇಶಗಳಿಗೆ ತಹಸೀಲ್ದಾರ್ ಎಂ ಮಮತಾ ಹಾಗು ತಾಪಂ ಕಾರ್ಯನಿರ್ವಹಣಾಧಿಕಾರಿ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಸೀಲ್ದಾರ್‌ ಮಮತಾ ಮಾತನಾಡಿ, ಕಳೆದ ವಾರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಶನದಲ್ಲಿ ಇಲ್ಲಿಯ ಅಬ್ಬಿಕಟ್ಟೆ ಭರ್ತಿಯಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗ್ರತವಾಗಿರಲು ಮಾಹಿತಿ ನೀಡಲಾಗಿತ್ತು. ಅಲ್ಲದೆ ಈ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಬದಲಿ ಮಾರ್ಗದಲ್ಲಿ ಗ್ರಾಮಗಳಿಗೆ ಬರಲು ಸೂಚನೆ ನೀಡಲಾಗಿದೆ. ಈಗಾಗಲೇ ಬೆಳೆಗಳಿಗೆ ನೀರು ನುಗ್ಗಿರುವ ಪರಿಣಾಮದಿಂದಾಗಿ ಬೆಳೆಗಳು ಹಾನಿಯಾಗಿದ್ದು, ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲು ನಮ್ಮ ಇಲಾಖೆಯ ಆರ್‌ಐ ಹಾಗೂ ರಾಜಸ್ವ ನಿರೀಕ್ಷಕರು ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾ,ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.