ಸಾರಾಂಶ
ಹಾಸನದ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದ 9 ಜನ ಮೃತಪಟ್ಟ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ ಎಂದಿದ್ದಾರೆ.
ಚನ್ನರಾಯಪಟ್ಟಣ: ಹಾಸನದ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದ 9 ಜನ ಮೃತಪಟ್ಟ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.