ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಅಭಿನವ ಸಿದ್ಧಲಿಂಗ ಶ್ರೀ

| Published : Nov 05 2025, 03:15 AM IST

ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಅಭಿನವ ಸಿದ್ಧಲಿಂಗ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದಾಗಿ ನಯಾನಗರದ ಸುಖದೇವಾನಂದ ಪುಣ್ಯಾಶ್ರಮದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದಾಗಿ ನಯಾನಗರದ ಸುಖದೇವಾನಂದ ಪುಣ್ಯಾಶ್ರಮದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಚನ್ನಮ್ಮಾಜಿ ವೃತ್ತದಲ್ಲಿ ಬೆಳಗಾವಿ ಜಿಲ್ಲಾ ಕಬ್ಬು ಬೆಳೆಗಾರರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ 2ನೇ ದಿನದ ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ರೈತರು ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಯೋಗ್ಯವಾದ ಬೆಂಬಲ ಬೆಲೆ ಸಿಗುವಂತಾಗಬೇಕು. ಈಗಾಗಲೇ ಕಳೆದ ಒಂದು ವಾರದಿಂದ ಗುರ್ಲಾಪುರದಲ್ಲಿ ನಡೆದ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಬೈಲಹೊಂಗಲದಲ್ಲಿಯೂ ಸಹ ಬೆಳಗಾವಿ ಜಿಲ್ಲಾ ಕಬ್ಬು ಬೆಳೆಗಾರರು ಹೋರಾಟ ಹಮ್ಮಿಕೊಂಡು ಸರ್ಕಾರ ಮತ್ತು ಕಾರ್ಖಾನೆಗಳಿಗೆ ಎಚ್ಚರಿಕೆ ನೀಡುತ್ತಿರುವ ರೈತರ ಹೋರಾಟ ನ್ಯಾಯ ಸಮ್ಮತವಾಗದೆ. ಪ್ರತಿ ಟನ್‌ಗೆ ₹3500 ನೀಡುವಂತೆ ಒತ್ತಾಯಿಸಿದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ನಾನಾಸಾಹೇಬ ಪಾಟೀಲ ಮಾತನಾಡಿ, ರೈತರ ಹೋರಾಟಕ್ಕೆ ಸದಾ ಬೆಂಬಲ ವ್ಯಕ್ತ ಪಡಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಮಲ್ಲಿಕಾರ್ಜುನ ಹುಂಬಿ, ಎಫ್.ಎಸ್.ಸಿದ್ದನಗೌಡರ, ಮಹಾಂತೇಶ ಕಮತ, ಜಗದೀಶ ಬೂದಿಹಾಳ, ಎಸ್.ಕೆ.ಮೆಳ್ಳಿಕೇರಿ, ಉದಯ ಬೂದಿಹಾಳ, ಉಮೇಶ ಬೋಳೆತ್ತಿನ, ಪ್ರಶಾಂತ ನೆಗೂರ್, ಬಸವರಾಜ ಹುಬ್ಬಳ್ಳಿ, ಸುರೇಶ ವಾಲಿ, ವಿಶಾಲ ಬೋಗುರ, ಮಹಾಂತೇಶ ಕಲಭಾವಿ,ಗುರುಸಿದ್ದಪ್ಪ ಕೋಟಗಿ, ಆಟೋ ಚಾಲಕರ ಸಂಘ ಹಾಗೂ ಕರವೇ ಪದಾಧಿಕಾರಿಗಳು,ರೈತರು ಇದ್ದರು.